July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಡಿಸೆಂಬರ್ 27ರಂದು ಮೇಕ್ ಎ ಚೇಂಜ್ ಫೌಂಡೇಶನ್ ಮತ್ತು ನಗರ ಪೊಲೀಸ್ ಸಹಭಾಗಿತ್ವದಲ್ಲಿ ‘ನಶೆ ಮುಕ್ತ’ ಅಭಿಯಾನ

ಡಿಸೆಂಬರ್ 27ರಂದು ಶನಿವಾರ ಮಂಗಳೂರು ನಗರ ಪೊಲೀಸ್ ಸಹಭಾಗಿತ್ವದಲ್ಲಿ ಮೇಕ್ ಎ ಚೇಂಜ್ ಫೌಂಡೇಶನ್‌ ಪ್ರಯುಕ್ತ ”ನಶೆ ಮುಕ್ತ ಮಂಗಳೂರು” ಅಭಿಯಾನವನ್ನು 102 ಕಾರ್ಯಕ್ರಮಗಳ ಸಹಿತ ಬ್ರಹತ್ ಮಟ್ಟದಲ್ಲಿ ಆಯೋಜಿಸಲು ಉದ್ದೇಶಿಸಿದೆ ಎಂದು ಇಂದು ಡಿಸೆಂಬರ್ 9ರಂದು ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಸುಹೈಲ್ ಕಂದಕ್ ಅವರು ತಿಳಿಸಿದ್ದಾರೆ.

ಈ ಕಾರ್ಯಕ್ರಮದುದ ಉದ್ಘಾಟನೆಯನ್ನು ವಿಧಾನ ಸಭಾ ಅಧ್ಯಕ್ಷರಾದ ಸನ್ಮಾನ್ಯ ಯು.ಟಿ. ಖಾದರ್, ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ದರ್ಶನ್ ಎಚ್.ವಿ.   ಹಾಗೂ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಹಿತ ಹಲವು ಗಣ್ಯರು ಉಪಸ್ಥಿತರಿರುತ್ತಾರೆ. ವಿಶೇಷವಾಗಿ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಢಾನ್ಹಾ, ರಾಮಕೃಷ್ಣ ಮಠದ ಸ್ವಾಮೀಜಿಗಳಾದ ಶ್ರೀ ಯೊಗೆಶಾನಂದ ಸ್ವಾಮೀಜಿ ಮತ್ತು ಮಂಗಳೂರು ಖಾಝಿಯವರಾದ ತ್ವಾಕ ಅಹಮ್ಮದ್ ಮುಸ್ಲಿಯಾರ್ ರವರನ್ನೊಳಗೊಂಡು ಹಲವು ಧಾರ್ಮಿಕ ಮುಖಂಡರು ಅಭಿಯಾನದೊಂದಿಗೆ ಸೇರಿಕೊಳ್ಳಲಿದ್ದಾರೆ ಹಾಗೂ ನಮ್ಮ ತುಳುನಾಡಿನ ಪ್ರಸಿದ್ಧ ನಟರು ನಮ್ಮೊಂದಿಗೆ ಕೈ ಜೋಡಿಸಲಿದ್ದಾರೆ.

ಈ ಕಾರ್ಯಕ್ರಮವು ವಿಶೇಷವಾಗಿ ಯುವಕರಿಗೆ ಅದರಲ್ಲೂ ಮುಖ್ಯವಾಗಿ ವಿದ್ಯಾರ್ಥಿಗಳಿಗಾಗಿ ಆಯೋಜಿಸುತ್ತಿದ್ದು ಇದರ ಅಂಗವಾಗಿ ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಹಲವು ಸ್ಪರ್ಧೆಗಳನ್ನು ನಡೆಸಲು ತೀರ್ಮಾನಿಸಿದೆ ಎಂದರು.

ರೀಲ್ & ಶಾರ್ಟ್ ವಿಡಿಯೋ ಸ್ಪರ್ಧೆ : ಪ್ರಸ್ತುತ ಶೈಲಿಯಲ್ಲಿ ಯುವಕೇಂದ್ರಿತವಾಗಿ 30-60 ಸೆಕೆಂಡುಗಳ ರೀಲ್ ಅಥವಾ ಶಾರ್ಟ್ ವಿಡಿಯೋ ತಯಾರಿಸಿ, ಮಾದಕ ದ್ರವ್ಯದ ಹಾನಿ ಮತ್ತು ಜಾಗೃತಿ ಸಂದೇಶ ಜನರಿಗೆ ತಲುಪಿಸುವುದು.

ಮಾದಕಮುಕ್ತ ಇನೋವೇಶನ್ ಮಾದರಿ ಪ್ರದರ್ಶನ: ಅಂತರ್ ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ಮುಕ್ತ ಮಂಗಳೂರಿನ ಮಾದರಿಗಳು ಅಥವಾ ಅವಿಷ್ಕಾರಗಳನ್ನು ಪ್ರದರ್ಶಿಸಲು ಅವಕಾಶ.

ಪೇಪರ್ ಪ್ರೆಸೆಂಟೇಶನ್ : ಮಾದಕ ದ್ರವ್ಯದ ತಡೆಗೆ ಹೊಸ ಚಿಂತನೆಯ ಬಗ್ಗೆ ಪ್ರಬಂದ ಬರೆದು ಆಯ್ದ ಪ್ರಬಂದ ಮಂಡನೆ ಮಾಡುವುದು.

ಫಿಟ್ನೆಸ್ ಚಾಲೆಂಜ್: ಮಂಗಳೂರಿನ ಪ್ರತಿಷ್ಟಿತ ಮಾಲ್ ನಲ್ಲಿ ನಡೆಸಲಾಗುವುದು.

ಡಿಜಿಟಲ್ ಪೋಸ್ಟರ್ ಸ್ಪರ್ಧೆ: ಸೃಜನಾತ್ಮಕ ಡಿಜಿಟಲ್ ಪೋಸ್ಟರ್ ಮೂಲಕ ಮಾದಕ ಮುಕ್ತ ಜಾಗೃತಿ ಮೂಡಿಸಲು ಅವಕಾಶ.

ಒನ್ ಡೇ ಇನ್‌ಫ್ಲುಯೆನ್ಸರ್: ಕ್ರಿಯೇಟಿವ್ ಕಂಟೆಂಟ್ ಮುಖಾಂತರ ಸಮಾಜಕ್ಕೆ ಇನ್‌ಫ್ಲೂಯೆನ್ಸರ್ ಆಗಿ ಮಾದಕ ಮುಕ್ತ ಸಂದೇಶ ಹರಡುವ ಅಭ್ಯಾಸಕ್ಕಾಗಿ ಈ ಕಾರ್ಯಕ್ರಮ.

ಫ್ಲಾಶ್ ಮೋಬ್ : ಸಂಗೀತ ಮತ್ತು ನೃತ್ಯದ ಮೂಲಕ ಸಾರ್ವಜನಿಕ ಸ್ಥಳದಲ್ಲಿ ಜಾಗೃತಿ ಕಾರ್ಯಕ್ರಮ.

ಈ ಕಾರ್ಯಕ್ರಮವು ಯವಕರಲ್ಲಿ ಮಾದಕದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸೃಜನಾತ್ಮಕ ಸಮಾಜವನ್ನು ಕಟ್ಟುವ ಉದ್ದೇಶವನ್ನು ಹೊಂದಿದ್ದು ಅಭಿಯಾನದ ಉದ್ಘಾಟನೆಯು ಡಿಸೆಂಬರ್ 27 ರಂದು ಶನಿವಾರ ಮಂಗಳೂರಿನ ಟಿ.ಎಂ.ಎ. ಪೈ ಇಂಟರ್‌ನ್ಯಾಷನಲ್ ಕನ್‌ವೆನ್ ಷನ್ ಸೆಂಟರ್ ನಲ್ಲಿ ನಡೆಯಲಿದೆ. ಆದ್ದರಿಂದ ಈ ಕಾರ್ಯಕ್ರಮದಲ್ಲಿ ಎಲ್ಲಾ ಯುವಕರು, ಮುಖ್ಯವಾಗಿ ವಿದ್ಯಾರ್ಥಿಗಳು ಭಾಗವಹಿಸಲು ಆಹ್ವಾನಿಸಲಾಗಿದೆ ಎಂದು ಕರೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ನಗರ ACP ರವೀಶ್ ನಾಯಕ್, ಕಾಂಗ್ರೆಸ್ ನಾಯಕ ವಿಕಾಸ್ ಶೆಟ್ಟಿ, ಬಾರ್ನ್ ಅಗೇನ್ ರಿಕವರಿ ಸೆಂಟರ್ ಬೀನಾ ಸಲ್ದಾಣ, AICU ರಾಜ್ಯಾಧ್ಯಕ್ಷ ಅಲ್ವಿನ್‌ ಡಿಸೋಜ ಪಾನೀರ್, ಅಬ್ದುಲ್ ಅಝೀಝ್ ಅಭಿಶೇಕ್ ವಾಲ್ಮೀಕಿ ಮುಂತಾದವರು ಉಪಸ್ಥಿತರಿದ್ದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page