ಕೋಮು ದ್ವೇಷ ಭಾಷಣ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು
ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ

ಉಪ್ಪಳಿಗೆಯಲ್ಲಿ ಅಕ್ಟೋಬರ್ 20 ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಬೆಳೆಸುವ ಮತ್ತು ಅವಮಾನಕಾರಿ ಭಾಷಣ ಮಾಡಿದ್ದಾರೆಯೆಂಬ ಆರೋಪದಡಿ ದಾಖಲಾದ ಪ್ರಕರಣದಲ್ಲಿ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ.


ಈ ಪ್ರಕರಣವನ್ನು ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಇಂದು ಡಿಸೆಂಬರ್ 10ರಂದು ಬುಧವಾರ ಜಾಮೀನು ಮಂಜೂರು ಮಾಡಿದೆ.

ಡಾ. ಪ್ರಭಾಕರ್ ಭಟ್ ಅವರ ಪರವಾಗಿ ಪುತ್ತೂರಿನ ಕಜೆ ಲಾ ಚೇಂಬರ್‌ನ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ವಾದ ಮಂಡಿಸಿದರು.




