September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್ ಅವರು ವಿಧಾನಮಂಡಲ ಅಧಿವೇಶನದಲ್ಲಿ ತೀವ್ರವಾಗಿ ಆಕ್ಷೇಪಿಸಿದರು. ಅಕ್ರಮ ತಿಳಿದ ಕೂಡಲೇ ಆಡಿಯೋ, ವೀಡಿಯೋ ಸಾಕ್ಷ್ಯಗಳೊಂದಿಗೆ, ಅವಧಿ ಮೀರಿದ ಔಷಧಿಗಳ ರಾಶಿಯ ದಾಖಲೆಗಳನ್ನೂ ಸೇರಿಸಿ ಉನ್ನತ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಅವರು ತಿಳಿಸಿದರು. ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲೂ ವಿಷಯವನ್ನು ಪ್ರಸ್ತಾಪಿಸಲಾಗಿದೆ.

ಹಾಸನ, ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗಗಳಲ್ಲಿ ಅವಧಿ ಮೀರಿದ ಔಷಧಿಗಳನ್ನು ಸಂಗ್ರಹಿಸಿ ಏಜೆಂಟರ ಮುಖಾಂತರ ಮಂಗಳೂರಿಗೆ ತರುವ ವ್ಯವಸ್ಥಿತ ಜಾಲ ಇದಕ್ಕೆ ಕಾರಣವಾಗಿರುವುದಾಗಿ ಶಾಸಕ ಕಾಮತ್ ಹೇಳಿದರು. ಈ ಬಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದರೂ ಇಲ್ಲಿಯವರೆಗೂ ಅಧಿಕಾರಿಗಳ ಮೇಲೆ ಕ್ರಮದ ಕೊರತೆ ಏಕೆ? ಸರ್ಕಾರವೇ ಇವರ ರಕ್ಷಣೆಗೆ ನಿಂತಿದೆಯೇ ಎಂದು ಅವರು ಪ್ರಶ್ನಿಸಿದರು.

“ಪೂರೈಕೆ ಮಾಡಿದವರು ಯಾರು? ಇದಕ್ಕೆ ಹಿಂದೆ ಯಾರಿದ್ದಾರೆ? ಸಂಪೂರ್ಣ ಸತ್ಯವನ್ನು ಬಹಿರಂಗಗೊಳಿಸಬೇಕು,” ಎಂದು ಅವರು ಆಗ್ರಹಿಸಿದರು. ಅಲ್ಲದೇ ಎಂ.ಆರ್.ಪಿ.ಎಲ್. ಕಂಪೆನಿಯಿಂದ ಸಿ.ಎಸ್.ಆರ್. ಅನುದಾನದಲ್ಲಿ ಮಂಗಳೂರಿನ ಆಯುಷ್ ಸಂಯುಕ್ತ ಆಸ್ಪತ್ರೆಗೆ ನೀಡಿದ ರೂಪಾಯಿ 38.50 ಲಕ್ಷದ ಬಳಕೆಯಲ್ಲಿ ಅಕ್ರಮ ನಡೆದಿದೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಿರುವ ವಿಚಾರ ಅವರ ಅಸಮಾಧಾನಕ್ಕೆ ಕಾರಣವಾಯಿತು.

“ಇಂತಹ ಅಕ್ರಮ ಮಾಡಲು ಅಧಿಕಾರಿಗಳಿಗೆ ಧೈರ್ಯ ಬರಲು ಹೇಗೆ ಸಾಧ್ಯ? ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮವಾಗದಿರುವುದು ಅತ್ಯಂತ ಗಂಭೀರ. ಹೀಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಯಾವ ಕಂಪೆನಿಯೂ ಸರ್ಕಾರಿ ಸಂಸ್ಥೆಗಳಿಗೆ ಸಿ.ಎಸ್.ಆರ್ ಅನುದಾನ ನೀಡಲು ಮುಂದೆ ಬರೋದಿಲ್ಲ,” ಎಂದು ಶಾಸಕ ಕಾಮತ್ ತೀವ್ರವಾಗಿ ಪ್ರಶ್ನಿಸಿದರು.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page