September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆತ್ತಲೆ ಫೋಟೋ ವೈರಲ್ ಬೆದರಿಕೆ: ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ

ಬೆತ್ತಲೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದರಿಂದ ಮನೋಭೀತನಾದ ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ.

ಕೇರಳ ಮೂಲದ 25 ವರ್ಷ ಪ್ರಾಯದ ಜಗನ್ ಮೋಹನ್ ಮೃತ ವಿದ್ಯಾರ್ಥಿಯಾಗಿದ್ದು, ನಗರದ ಖಾಸಗಿ ಕಾಲೇಜೊಂದರಲ್ಲಿ ಎಂಬಿಎ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದ ಶಾಂತಿನಗರದಲ್ಲಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ಆತ, ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆತ್ತಲೆ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ನಿರಂತರವಾಗಿ ಬೆದರಿಕೆ ಹಾಕಲಾಗುತ್ತಿತ್ತು ಎಂಬ ಉಲ್ಲೇಖ ಡೆತ್ ನೋಟ್‌ನಲ್ಲಿ ಕಂಡುಬಂದಿದ್ದು, ಈ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page