September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಉಡುಪಿ ಶೀರೂರು ಮಠ ಪರ್ಯಾಯ – ಡಿಸೆಂಬರ್ 16ರಂದು ಮಂಗಳೂರಿನಲ್ಲಿ ಪೂರ್ವಭಾವಿ ಸಭೆ

ಜಗದ್ಗುರು ಶ್ರೀ ಮಧ್ವಾಚಾರ್ಯರು ಸ್ಥಾಪಿಸಿದ ಅಷ್ಟ ಮಠಗಳ ಪೈಕಿ ಒಂದಾದ ಉಡುಪಿ ಶೀರೂರು ಮಠದ ಯತಿಗಳಾದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ದಿನಾಂಕ 18-01-2026ರಂದು ಭಾನುವಾರ ಶ್ರೀ ಕೃಷ್ಣನ ಪೂಜಾ ದೀಕ್ಷೆಯೊಂದಿಗೆ ತಮ್ಮ ಪ್ರಥಮ ಪರ್ಯಾಯ ಸರ್ವಜ್ಞ ಪೀಠಾರೋಹಣವನ್ನು ನೆರವೇರಿಸಲಿದ್ದಾರೆ.

ಈ ಮಹತ್ವದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಪೂಜ್ಯ ಶ್ರೀಪಾದರನ್ನು ಮಂಗಳೂರಿಗೆ ಭವ್ಯವಾಗಿ ಸ್ವಾಗತಿಸುವ ಕಾರ್ಯಕ್ರಮಗಳ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಲು ಡಿಸೆಂಬರ್ 16ರಂದು ಮಂಗಳವಾರ ಸಂಜೆ 5 ಗಂಟೆಗೆ ಕೊಡಿಯಾಲ್‌ಬೈಲ್‌ನ ಶಾರದಾ ವಿದ್ಯಾಲಯದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ.

ಡಾ. ಎಂ.ಬಿ. ಪುರಾಣಿಕ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ ಶೀರೂರು ಮಠದ ಪ್ರಮುಖರು ಭಾಗವಹಿಸಲಿದ್ದಾರೆ. ಸುಧಾಕರ ರಾವ್ ಪೇಜಾವರ, ಗುರುಪ್ರಸಾದ್ ಕಡಂಬಾರ್ ಹಾಗೂ ಬಿ. ಸುಬ್ರಹ್ಮಣ್ಯ ರಾವ್ ಉಪಸ್ಥಿತರಿರಲಿದ್ದಾರೆ.

ಶೀರೂರು ಮಠದ ಶಿಷ್ಯವೃಂದ, ಸಮಾಜಬಾಂಧವರು, ವಿವಿಧ ಸಂಘ–ಸಂಸ್ಥೆಗಳ ಪ್ರಮುಖರು ಈ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕಾರ ನೀಡಬೇಕೆಂದು ಶೀರೂರು ಪರ್ಯಾಯ ಸಮಿತಿಯ ಪರವಾಗಿ ಎಸ್. ಪ್ರದೀಪ ಕುಮಾರ ಕಲ್ಕೂರ ಅವರು ವಿನಂತಿಸಿದ್ದಾರೆ.

ಸಂಪರ್ಕ ಸಂಖ್ಯೆ:

ಡಾ. ಎಂ.ಬಿ. ಪುರಾಣಿಕ್ – 9448143321

ಎಸ್. ಪ್ರದೀಪ ಕುಮಾರ ಕಲ್ಕೂರ – 9845083736

ಸುಧಾಕರ ರಾವ್ ಪೇಜಾವರ – 9448546051

ಬಿ. ಸುಬ್ರಹ್ಮಣ್ಯ ರಾವ್ – 9448012068

ಗುರುಪ್ರಸಾದ್ ಕಡಂಬಾರ್ – 9380999424

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page