September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದಲ್ಲಿ ಗಾಂಜಾ ಮಾರಾಟ ಯತ್ನ – ಇಬ್ಬರ ಬಂಧನ

810 ಗ್ರಾಂ ಗಾಂಜಾ ಹಾಗೂ ಕಾರುಆಟೋ ಸ್ವಾಧೀನ

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 810 ಗ್ರಾಂ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಡಿಸೆಂಬರ್ 13ರಂದು ಶನಿವಾರ ಸಂಜೆ, ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಹನಮನಗರದ ರಾಷ್ಟ್ರೀಯ ಹೆದ್ದಾರಿ ಸಮೀಪ ಅಕ್ರಮವಾಗಿ ಗಾಂಜಾ ಮಾರಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ, ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ. (ಕಾನೂನು ಮತ್ತು ಸುವ್ಯವಸ್ಥೆ), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದರು.

ಸ್ಥಳ ಪರಿಶೀಲನೆಯ ವೇಳೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದ ನಿರ್ಜನ ಪ್ರದೇಶದಲ್ಲಿ KA-19-MN-3664 ಸಂಖ್ಯೆಯ ಕಾರು ಹಾಗೂ KA-19-AE-0166 ಸಂಖ್ಯೆಯ ಆಟೋ ರಿಕ್ಷಾದ ಬಳಿ ಇಬ್ಬರು ಅನುಮಾನಾಸ್ಪದವಾಗಿ ನಿಂತಿರುವುದು ಕಂಡುಬಂದಿತು. ವಿಚಾರಣೆ ನಡೆಸಿದಾಗ ಆರೋಪಿಗಳು ಬಂಟ್ವಾಳ ತುಂಬೆ ನಿವಾಸಿ 31 ವರ್ಷ ಪ್ರಾಯದ ಸಮೀರ್ ಹಾಗೂ ಬಂಟ್ವಾಳ ಗೂಡಿನ ಬಳಿ ನಿವಾಸಿ 35 ವರ್ಷ ಪ್ರಾಯದ ಮೊಹಮ್ಮದ್ ಅಸೀಫ್ ಎಂದು ಗುರುತಿಸಲ್ಪಟ್ಟರು.

ವಿಚಾರಣೆಯಲ್ಲಿ ಹೆಚ್ಚಿನ ಹಣ ಗಳಿಸುವ ಉದ್ದೇಶದಿಂದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದು, ತಪಾಸಣೆಯಲ್ಲಿ ಕಾರಿನಲ್ಲಿ 450 ಗ್ರಾಂ ಹಾಗೂ ಆಟೋ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ.

ಒಟ್ಟು 810 ಗ್ರಾಂ ಗಾಂಜಾ ಹಾಗೂ ಬಳಸಿದ್ದ ವಾಹನಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 183/2025, ಕಲಂ 8(c), 20(b)(ii)(a) NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page