August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲ್ವಾರ್ ಹಿಡಿದು ನೃತ್ಯ ಮಾಡಿದ ರೀಲ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ – ಇಬ್ಬರು ಆರೋಪಿಗಳ ಬಂಧನ

ತಲ್ವಾರ್ ಹಿಡಿದು ಹಾಡಿಗೆ ನೃತ್ಯ ಮಾಡಿರುವ ರೀಲ್ಸ್ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಆರೋಪದಡಿ ಕಾವೂರು ಪೊಲೀಸ್ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಡಿಸೆಂಬರ್ 13ರಂದು ಶನಿವಾರ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ “Suresu Psy” ಎಂಬ ಹೆಸರಿನ ಖಾತೆ ಹೊಂದಿರುವ ಸುರೇಶ ಎಂಬ ವ್ಯಕ್ತಿ, ಅಮೀರ್ ಸುಹೇಲ್ ಎಂಬಾತ ತಲ್ವಾರ್ ಹಿಡಿದು ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋವನ್ನು VIBES ಹಾಗೂ ಬಿಳಿ ಬಣ್ಣದ ಹಾರ್ಟ್ ಗುರುತಿನೊಂದಿಗೆ ಸ್ಟೋರಿಯಾಗಿ ಪೋಸ್ಟ್ ಮಾಡಿದ್ದನು. ಈ ವಿಡಿಯೋ ಸಾರ್ವಜನಿಕರಲ್ಲಿ ಆತಂಕ ಮತ್ತು ಭಯ ಮೂಡಿಸುವಂತಿದ್ದರಿಂದ ಅಮೀರ್ ಸುಹೇಲ್ ಹಾಗೂ ಸುರೇಶ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 188/2025 ಅಡಿ, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 352(2), ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯ ಕಲಂಗಳು 4 ಮತ್ತು 25(1ಬಿ), ಹಾಗೂ ಐಟಿ ಕಾಯ್ದೆಯ ಕಲಂ 66ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆಯ ವೇಳೆ ದಿನಾಂಕ 13-12-2025 ರಂದು ರೀಲ್ಸ್ ಮಾಡಲು ಬಳಸಿದ ತಲ್ವಾರ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲು ಬಳಸಿದ ಮೊಬೈಲ್ ಫೋನ್‌ಗಳ ಸಹಿತ ಇಬ್ಬರು ಆರೋಪಿಗಳನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಬಂಧಿತರ ವಿವರ:

  1. ಅಮೀರ್ ಸುಹೇಲ್ (28 ವರ್ಷ), ತಂದೆ: ದಿ. ಉಮ್ಮರ್, ನಿವಾಸ: ಅಮೀನ್ ಉಲ್ಲಾ, 1ನೇ ಮಹಡಿ, ಜೆ.ಡಮ್ ರೋಡ್, ಬಂದರು, ಮಂಗಳೂರು.
  2. ಸುರೇಶ (29 ವರ್ಷ), ತಂದೆ: ದಿ. ರಮೇಶ್, ನಿವಾಸ: 2-19/30, ಧನುಷ್ ಗ್ರೌಂಡ್ ಬಳಿ, ಉರುಂದಾಡಿಗುಡ್ಡೆ, ಕಾವೂರು, ಮಂಗಳೂರು.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಲ್ಲಿ, ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಂ. ಬೈಂದೂರು, ಪೊಲೀಸ್ ಉಪನಿರೀಕ್ಷಕರಾದ ಮಲ್ಲಿಕಾರ್ಜುನ ಬಿರಾದಾರ್ ಹಾಗೂ ಠಾಣಾ ಸಿಬ್ಬಂದಿಗಳಾದ ಸಂಭಾಜಿ ಕದಂ, ಕೆಂಚನ ಗೌಡ, ಶರಣಪ್ಪ, ರಾಘವೇಂದ್ರ ಮತ್ತು ರಿಯಾಜ್ ಅವರ ತಂಡವು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದೆ.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page