August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಿಲ್ಲವ ಸಮಾಜ ಸೇವಾ ಸಂಘ ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ‘ಬೈದ್ಯಶ್ರೀ ಕ್ರೀಡೋತ್ಸವ–2025’ ಅದ್ಧೂರಿ ಆಚರಣೆ

ಕಲ್ಲಡ್ಕ ವಲಯದ ಗೋಳ್ತಮಜಲು, ಬಾಲ್ತಿಲ, ಅಮ್ಟೂರು, ವೀರಕಂಭ–ಬೋಳಂತೂರು ಹಾಗೂ ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬೈದ್ಯಶ್ರೀ ಕ್ರೀಡೋತ್ಸವ–2025 ಡಿಸೆಂಬರ್ 14ರಂದು ರವಿವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ವಿಜೃಂಭಣೆಯಿಂದ ಜರಗಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗೋಳ್ತಮಜಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು. ಮಾಜಿ ಶಾಸಕ ಎ. ರುಕ್ಮಯ ಪೂಜಾರಿ ಎಳ್ತಿಮಾರು ತೆಂಗಿನಕಾಯಿ ಹೊಡೆದು ಕ್ರೀಡಾಕೂಟ ಮೈದಾನವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಜಗನ್ನಾಥ್ ಸಾಲಿಯನ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಬಂಟ್ವಾಳ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಅವರು ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿ ಮಾತನಾಡಿ, ಸಂಘಟನೆಯಲ್ಲಿ ರಾಜಕೀಯ ಪ್ರವೇಶವಾಗದಂತೆ ಜಾಗೃತಿ ವಹಿಸಿ, ಸಮಾಜಬಾಂಧವರ ಕಷ್ಟಗಳಿಗೆ ಧ್ವನಿಯಾಗಿ, ಮಾದರಿ ಸಂಘಟನೆಯಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಕಲ್ಲಡ್ಕ ವಲಯದ ಗ್ರಾಮ ಸಮಿತಿಗಳ ಎಲ್ಲಾ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಅಂತರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ಬಿಲ್ಲವ ಸಂಘದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಹಾಗೂ ಬಿಲ್ಲವ ಸಂಘದ ಮಹಿಳಾ ಅಧ್ಯಕ್ಷೆ ಪುಷ್ಪ ಸತೀಶ್ ದೇವಸ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ವೇದಿಕೆಯಲ್ಲಿ ಗೋಕರ್ಣನಾಥ ಕ್ಷೇತ್ರ ಕುದ್ರೊಳಿ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಪುತ್ತೂರು ಅಕ್ಷಯ ಕಾಲೇಜಿನ ಜಯಂತ್ ನಡುಬೈಲು, ಮುರ್ತೆದಾರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ಪುರುಷೋತ್ತಮ, ಬಾಲ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಚೆಂಡೆ, ಬಿಜೆಪಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಪುಟಾಣಿ ಮಕ್ಕಳು, ಶಾಲಾ ಮಕ್ಕಳು, ಪುರುಷರು ಮತ್ತು ಮಹಿಳೆಯರಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯದರ್ಶಿ ರಮೇಶ್ ಹೊಸಕಟ್ಟ ಸ್ವಾಗತಿಸಿ, ರವೀಂದ್ರ ಪಾದೆ ಪ್ರಾಸ್ತಾವಿಕ ವರದಿ ಮಂಡಿಸಿದರು. ವಸಂತ ಬಟ್ಟಹಿತ್ತಿಲು ವಂದನಾ ಅರ್ಪಿಸಿದರು. ಖ್ಯಾತ ನಿರೂಪಕಿ ರೇಣುಕ ಕಣಿಯೂರು ಹಾಗೂ ದಿನೇಶ್ ಕೃಷ್ಣಕೊಡಿ ಕಾರ್ಯಕ್ರಮ ನಿರ್ವಹಿಸಿದರು. ಕಲ್ಲಡ್ಕ ಬಿಲ್ಲವ ಸಮಾಜ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page