September 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತರ ಮೇಲೆ ಹಲ್ಲೆ ಆರೋಪ: ಜುವೆಲ್ಲರಿ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ವಯಸ್ಸಿನ ಪ್ರಕರಣದ ಪಿರ್ಯಾದಿದಾರರು ದಿನಾಂಕ 15-12-2025 ರಂದು ಸೋಮವಾರ ಸಂಜೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಒಂದು ಜುವೆಲ್ಲರಿಯ ಹಿಂಭಾಗದ ಬಹಿರ್ದೆಸೆಗೆ ಹೋಗಿದ್ದ ಸಂದರ್ಭದಲ್ಲಿ, ಜುವೆಲ್ಲರಿಯ ಸಿಬ್ಬಂದಿ ಸ್ಥಳಕ್ಕೆ ಬಂದು ಪಿರ್ಯಾದಿದಾರರು ಮತ್ತು ಅವರ ಸ್ನೇಹಿತರನ್ನು ತಡೆದು ನಿಲ್ಲಿಸಿದ್ದಾರೆ. ಅವರು ವಿಡಿಯೋ ಮಾಡುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಕರಾರು ನಡೆಸಿ ಮೂವರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಪಿರ್ಯಾದಿಯಲ್ಲಿ ಆರೋಪಿಸಲಾಗಿದೆ.

ಈ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 143/2025 ಅನ್ನು ಕಲಂ 126(2), 115(1) BNS–2023ರ ಅಡಿಯಲ್ಲಿ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದಂತೆ, ಸದ್ರಿ ಜುವೆಲ್ಲರಿಯ ಸಿಬ್ಬಂದಿಯವರು ಕೂಡ ದಿನಾಂಕ 17-12-2025 ರಂದು ಬುಧವಾರ ಬಾಲಕರ ವಿರುದ್ಧ ಪ್ರತಿದೂರು ಸಲ್ಲಿಸಿದ್ದು, ಈ ಪ್ರಕರಣದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

You may also like

News

Japanese Delegation from Kyoto Kagaku Visits Father Muller Charitable Institutions

A delegation from Kyoto Kagaku, Japan, visited the Father Muller Charitable Institutions (FMCI) on Monday, September 7, 2026. The delegation
News

ದಕ್ಷಿಣ ಕನ್ನಡ ಕಾಂಗ್ರೆಸ್‌ಗೆ ನೂತನ ಸಾರಥಿ – ಪದ್ಮರಾಜ್ ಆರ್. ಪೂಜಾರಿ ಜಿಲ್ಲಾಧ್ಯಕ್ಷರಾಗಿ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ

You cannot copy content of this page