September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ್ದ ಆರೋಪಿ ಬಂಧನ: ಸಿ.ಇ.ಎನ್. ಅಪರಾಧ ಪೊಲೀಸರಿಂದ ಕಾರ್ಯಾಚರಣೆ

mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್ ಮುಖಾಂತರ ಪ್ರಚೋದನಕಾರಿ ಹಾಗೂ ಸಾರ್ವಜನಿಕ ಶಾಂತಿ ಕದಡುವ ರೀತಿಯ ಸಂದೇಶಗಳನ್ನು ಹರಿಬಿಟ್ಟ ಆರೋಪದಲ್ಲಿ ಮಂಗಳೂರು ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಸಿ.ಇ.ಎನ್. ಅಪರಾಧ ಪೊಲೀಸರು ಬಂಧಿಸಿದ್ದಾರೆ. ಬಜಪೆ ಪೊಲೀಸ್ ಠಾಣಾ ಅಪರಾಧ ಸಂಖ್ಯೆ 84/2025, ಕಲಂ 353(1)(ಸಿ), 353(2), 56, 57 ಹಾಗೂ 189 ಭಾರತೀಯ ನ್ಯಾಯ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿತನನ್ನು ಮಂಗಳೂರಿನ ಕಾಟಿಪಳ್ಳ ನಿವಾಸಿ 23 ವರ್ಷ ಪ್ರಾಯದ ಅಭಿಷೇಕ್ ಎಂ. ಎಂದು ಗುರುತಿಸಲಾಗಿದೆ.

ಆರೋಪಿತನು mr_a_titude ಎಂಬ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ Hotel Nisarga ಎಂಬ ಹೋಟೆಲ್‌ನ ಫೋಟೋವನ್ನು ಹಾಕಿ, ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಜಪೆ ಪೊಲೀಸರು ರಾಜ ಅತಿಥ್ಯ ನೀಡುತ್ತಿದ್ದಾರೆ, ದಿನವೂ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟ ಒದಗಿಸುತ್ತಿದ್ದಾರೆ ಎಂಬಂತೆ ಪೊಲೀಸ್ ಇಲಾಖೆಯ ವಿರುದ್ಧ ಸುಳ್ಳು, ಅಪಪ್ರಚಾರಕಾರಿ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂದೇಶಗಳು ಸಾರ್ವಜನಿಕರಲ್ಲಿ ಪೊಲೀಸರ ಮೇಲಿನ ನಂಬಿಕೆಯನ್ನು ಕುಂದಿಸುವ ಹಾಗೂ ಶಾಂತಿ ಭಂಗಕ್ಕೆ ಕಾರಣವಾಗುವಂತಿದ್ದವು ಎನ್ನಲಾಗಿದೆ.

ಈ ಸಂಬಂಧ ದಿನಾಂಕ 08-05-2025 ರಂದು ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿ, ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ನಗರದ ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು.

ಪೊಲೀಸ್ ದಾಖಲೆಗಳ ಪ್ರಕಾರ, ಆರೋಪಿತನ ವಿರುದ್ಧ ಈ ಹಿಂದೆಯೂ ಕೊಲೆ, ಕೊಲೆಯತ್ನ, ಹಲ್ಲೆ ಹಾಗೂ ದರೋಡೆ ಸೇರಿದಂತೆ ಗಂಭೀರ ಪ್ರಕರಣಗಳು ದಾಖಲಾಗಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಹಾಗೂ ಕಾಪು ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

  1. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ. 11/2021 – ಕೊಲೆಯತ್ನ ಪ್ರಕರಣ
  2. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ. 137/2021 – ಹಲ್ಲೆ ಪ್ರಕರಣ
  3. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ. 62/2022 – ಕೊಲೆ ಪ್ರಕರಣ
  4. ಕಾಪು ಪೊಲೀಸ್ ಠಾಣಾ ಅ.ಕ್ರ. 62/2024 – ದರೋಡೆ ಪ್ರಕರಣ

ಪ್ರಕರಣದ ತನಿಖೆಯ ಭಾಗವಾಗಿ, ಸಿ.ಇ.ಎನ್. ಅಪರಾಧ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಆರೋಪಿತನನ್ನು ಪತ್ತೆಹಚ್ಚಿ ಬಂಧನ ಕ್ರಮ ಕೈಗೊಂಡಿದ್ದು, ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page