September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಹೇಶ್ ಶೆಟ್ಟಿ ತಿಮರೋಡಿಗೆ ಗಡಿಪಾರು ಆದೇಶ: ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ನಿಷ್ಕಾಸನೆ

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗಡಿಪಾರು ಮಾಡುವಂತೆ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ಕರ್ನಾಟಕ ಪೊಲೀಸ್ ಕಾಯ್ದೆ–1963ರ ಕಲಂ 55(ಎ) ಮತ್ತು (ಬಿ) ಅಡಿಯಲ್ಲಿ ದಿನಾಂಕ 17-09-2025 ರಂದು ಗಡಿಪಾರು ಆದೇಶ ಹೊರಡಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಪಿಟಿಷನ್ ಸಂಖ್ಯೆ 30021/2025 ಕುರಿತು ಮಾನ್ಯ ಉಚ್ಚ ನ್ಯಾಯಾಲಯವು, ಗಡಿಪಾರು ಆದೇಶವನ್ನು ಕೆ.ಪಿ. ಕಾಯ್ದೆಯ ಯಾವ ಕಲಂ ಅಡಿಯಲ್ಲಿ ಹೊರಡಿಸಲಾಗಿದೆ ಎಂಬುದನ್ನು ಸ್ಪಷ್ಟ ಕಾರಣಗಳೊಂದಿಗೆ ಪುನಃ ಆದೇಶ ಮಾಡುವಂತೆ ನಿರ್ದೇಶನ ನೀಡಿತ್ತು. ಉಚ್ಚ ನ್ಯಾಯಾಲಯದ ಆದೇಶದ ಪ್ರತಿಯನ್ನು ಸ್ವೀಕರಿಸಿದ 15 ದಿನಗಳೊಳಗೆ ಹೊಸ ಆದೇಶ ಹೊರಡಿಸುವಂತೆ ಸೂಚಿಸಲಾಗಿತ್ತು.

ಅದರಂತೆ, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿಯನ್ನು ದಿನಾಂಕ 16-12-2025 ರಿಂದ 16-09-2026 ರವರೆಗೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವಂತೆ ಪುನಃ ಆದೇಶ ಹೊರಡಿಸಿದ್ದಾರೆ.

ಈ ಗಡಿಪಾರು ಆದೇಶವನ್ನು ಜಾರಿಗೊಳಿಸುವ ಸಲುವಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ಆರೋಪಿತನ ನಿವಾಸಕ್ಕೆ ತೆರಳಿದಾಗ, ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಹಾಜರಿರಲಿಲ್ಲ. ಆದ್ದರಿಂದ, ಕರ್ನಾಟಕ ಪೊಲೀಸ್ ಕಾಯ್ದೆಯ ಅನ್ವಯ ತಲೆಮರೆಸಿಕೊಂಡಿರುವ ವ್ಯಕ್ತಿಗೆ ಅನುಸರಿಸಬೇಕಾದ ಪ್ರಕ್ರಿಯೆ ಪ್ರಕಾರ, ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ ಅವರ ಅನುಮತಿ ಪಡೆದು, ಗಡಿಪಾರು ಆದೇಶವನ್ನು ಸದ್ರಿಯವರ ಮನೆಯ ಗೋಡೆಯ ಮೇಲೆ ಅಂಟಿಸಿ ಹಾಗೂ ಉಜಿರೆ ಪರಿಸರದಲ್ಲಿ ಸಾರ್ವಜನಿಕವಾಗಿ ಪ್ರಚಾರ ಮಾಡಿ ಜಾರಿಗೊಳಿಸಲಾಗಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page