September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೀವ ಬೆದರಿಕೆ ಆರೋಪ: ಆರೋಪಿ ಚಿನ್ನ ಸಿ.ಎನ್. ದಂಪತಿಗೆ ರಕ್ಷಣೆ ಕೋರಿ ಬೆಳ್ತಂಗಡಿ ಠಾಣೆಗೆ ಮನವಿ

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಾಗೂ ಬಳಿಕ ಎಸ್‌.ಐ.ಟಿ.ಗೆ ವರ್ಗಾವಣೆಯಾದ ಅ.ಕ್ರ. 39/2025 ಪ್ರಕರಣದ ಆರೋಪಿತ ಚಿನ್ನ ಸಿ.ಎನ್. ಅವರು, ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಇರುವ ಸಾಧ್ಯತೆ ಇದೆ ಎಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ. ಎಂಬವರುಗಳಿಂದ ಜೀವ ಅಪಾಯ ಎದುರಾಗಬಹುದೆಂದು ಮನವಿಯಲ್ಲಿ ಉಲ್ಲೇಖಿಸಿ, ತಮ್ಮ ಹಾಗೂ ಪತ್ನಿಯ ರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಅವರು ದಿನಾಂಕ 18-12-2025ರಂದು ಗುರುವಾರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಅರ್ಜಿ ನೀಡಿದ್ದಾರೆ.

ಸದರ ಮನವಿಯನ್ನು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು, PO1070250601253 ಸಂಖ್ಯೆಯಂತೆ ದೂರರ್ಜಿಯನ್ನು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page