August 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು – ಹಾಸನದಲ್ಲಿ ಆರೋಪಿ ಬಂಧನ, ವಾಹನ ವಶ

ಕಡಬ ತಾಲೂಕಿನ ಶಿರಾಡಿ ನಿವಾಸಿ 46 ವರ್ಷ ಪ್ರಾಯದ ಸುರೇಶ್ ಅವರು ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಂಬ್ಯುಲೆನ್ಸ್ ಕಳವು ಪ್ರಕರಣ ದಾಖಲಾಗಿದ್ದು, ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪಿರ್ಯಾದಿದಾರ ಸುರೇಶ್ ಅವರು ಅಂಬ್ಯುಲೆನ್ಸ್ ವಾಹನ ಸಂಖ್ಯೆ KA-19-C-7557ರ ಚಾಲಕರಾಗಿದ್ದು, ಪ್ರತಿದಿನ ರಾತ್ರಿ ಗುಂಡ್ಯ ಚೆಕ್‌ಪೋಸ್ಟ್ ಬಳಿ ವಾಹನವನ್ನು ನಿಲ್ಲಿಸಿ ಲಾಕ್ ಮಾಡಿ ಮನೆಗೆ ತೆರಳುತ್ತಿದ್ದರು. ದಿನಾಂಕ 19.12.2025ರಂದು ಶುಕ್ರವಾರ ರಾತ್ರಿ ಕೂಡಾ ತುರ್ತು ಕರೆ ಬಂದಲ್ಲಿ ಬದಲಿ ಚಾಲಕರ ಅನುಕೂಲಕ್ಕಾಗಿ ಅಂಬ್ಯುಲೆನ್ಸ್ ಕೀಲಿಯನ್ನು ವಾಹನದೊಳಗೆ ಇಟ್ಟು ಹೋಗಿದ್ದರು. ಆದರೆ ಮರುದಿನ 20.12.2025ರಂದು ಶನಿವಾರ ಬೆಳಿಗ್ಗೆ ಅವರು ವಾಹನ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ ಅಂಬ್ಯುಲೆನ್ಸ್ ಕಳವಾಗಿರುವುದು ಗೊತ್ತಾಗಿದೆ.

ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 117/2025, ಕಲಂ 303(2) ಬಿ.ಎನ್.ಎಸ್ 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಯಿತು. ತನಿಖೆಯ ವೇಳೆ ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿಯಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ 22 ವರ್ಷ ಪ್ರಾಯದ ಶೋದನ್ ಎಂಬಾತನನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ನಂತರ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಳವಾಗಿದ್ದ ಅಂಬ್ಯುಲೆನ್ಸ್ ಅನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

CODP Extends Education Aid to Students, Spreads Awareness on Government Welfare Schemes

The Canara Organisation for Development and Peace (CODP) organised an Education Aid Cheque Distribution Programme along with an awareness session
News

ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ – ಕೆಲವೇ ಗಂಟೆಗಳಲ್ಲಿ ಉಡುಪಿ ಪೊಲೀಸರಿಂದ ಆರೋಪಿ ರಾಜು ಬಂಧನ

ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ

You cannot copy content of this page