August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಯುವ ಪ್ರತಿಭೆಗೆ ರಾಷ್ಟ್ರಮಟ್ಟದ ಗೌರವ – ರಿಶಲ್ ಫೆರ್ನಾಂಡಿಸ್‌ಗೆ ‘ದೇಶ್ ರತ್ನಾ’ ಪ್ರಶಸ್ತಿ

ಮೂಡುಬಿದಿರೆಯ ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆಯಾಗಿರುವ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನ ಪ್ರತಿಷ್ಠಿತ ‘ದೇಶ್ ರತ್ನಾ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿ ಅವರು ಮಾಡಿರುವ ಮಹತ್ವದ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಸಾಧನೆಗಳನ್ನು ಗುರುತಿಸಿ ಈ ಗೌರವವನ್ನು ಪ್ರದಾನ ಮಾಡಲಾಗುತ್ತಿದೆ.

ದೆಹಲಿಯ ಭವ್ಯ ಭಾರತ ಮಂಟಪದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಸಮ್ಮುಖದಲ್ಲಿ ರಿಶಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಲಿದೆ. ಭಾರತೀಯ ಯುವ ಅಸೋಸಿಯೇಷನ್ (ನವದೆಹಲಿ) ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.

ಯುವ ವಯಸ್ಸಿನಲ್ಲೇ ಸಾಹಿತ್ಯ, ವಾಗ್ಮಿತ್ವ ಹಾಗೂ ಸಾಮಾಜಿಕ ಚಟುವಟಿಕೆಗಳ ಮೂಲಕ ತಮ್ಮದೇ ಆದ ಗುರುತು ಮೂಡಿಸಿರುವ ರಿಶಲ್ ಫೆರ್ನಾಂಡಿಸ್ ಅವರ ಈ ಸಾಧನೆ ಮೂಡುಬಿದಿರೆ ಮಾತ್ರವಲ್ಲದೆ ಇಡೀ ಜಿಲ್ಲೆಯ ಹೆಮ್ಮೆಯಾಗಿದೆ. ಅವರ ಈ ಗೌರವಯುತ ಆಯ್ಕೆ ಯುವ ಪೀಳಿಗೆಗೆ ಪ್ರೇರಣೆಯಾಗಿದೆ ಎಂದು ಸಾಹಿತ್ಯ ಹಾಗೂ ಸಾಮಾಜಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗುತ್ತಿದೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page