July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ವಸ್ತಿಕ್ ಜೈನ ಯುವಜನ ಸಂಘ ಸಿದ್ದಕಟ್ಟೆ – 2025–26ರ ನೂತನ ಪದಾಧಿಕಾರಿಗಳ ಪದಗ್ರಹಣ

ನೂತನ ಅಧ್ಯಕ್ಷರಾಗಿ ವೀರೇಂದ್ರ ಎಂ. ಸಿದ್ದಕಟ್ಟೆ ಆಯ್ಕೆ

ಸ್ವಸ್ತಿಕ್ ಜೈನ ಯುವಜನ ಸಂಘ (ರಿ.), ಸಿದ್ದಕಟ್ಟೆ ಇದರ 2025–26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಡಿಸೆಂಬರ್ 22ರಂದು ಸೋಮವಾರ ಮಧ್ಯಾಹ್ನ 2.30ಕ್ಕೆ ಸ್ವಸ್ತಿಕ್ ಸಭಾ ಭವನ, ಸಿದ್ದಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ SDM ಕಾಲೇಜು ಉಜಿರೆಯ ನಿವೃತ್ತ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ ಡಾ. ಎ. ಜಯಕುಮಾರ್ ಶೆಟ್ಟಿ ಅವರು ನೂತನ ಪದಾಧಿಕಾರಿಗಳಿಗೆ ಪದ ಪ್ರದಾನ ಮಾಡಿದರು. ನೂತನ ಅಧ್ಯಕ್ಷರಾಗಿ ವೀರೇಂದ್ರ ಎಂ. ಸಿದ್ದಕಟ್ಟೆ, ಪ್ರದಾನ ಕಾರ್ಯದರ್ಶಿಯಾಗಿ ಶುಶಾಂತ್ ಹಾಗೂ ಕೋಶಾಧಿಕಾರಿಯಾಗಿ ಪ್ರಾಣೇಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು.

ಉಪಾಧ್ಯಕ್ಷರಾಗಿ ಅವನ್, ಸಚಿನ್ ಹೆಗ್ಡೆ, ವಿವೇಕ್ ರಾಜ್ ಮತ್ತು ಪ್ರಜೋತ್, ಜೊತೆ ಕಾರ್ಯದರ್ಶಿಯಾಗಿ ಆಕರ್ಷ್ ಜೈನ್, ಸಂಸ್ಕೃತಿಕ ಕಾರ್ಯದರ್ಶಿಯಾಗಿ ಸುಮನ್ ಜೈನ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಮನೀಷ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೌರವ ಸಲಹೆಗಾರರು ಹಾಗೂ ಪೂರ್ವಾಧ್ಯಕ್ಷರ ಮಂಡಳಿ ಸದಸ್ಯರಾದ ವಿನಯಚಂದ್ರ ಜೈನ್, ಡಾ. ಸುದೀಪ್, ಮದ್ವರಾಜ್ ಜೈನ್, ಪಾಂಡಿರಾಜ್ ಜೈನ್, ಅಶೋಕ್ ಜೈನ್, ಸುಜನ್ ಜೈನ್ ಹಾಗೂ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಅನಂತಪದ್ಮ ಮಹಿಳಾ ಸಂಘದ ಅಧ್ಯಕ್ಷೆ ಪ್ರೇಮ, ಅರ್ಕಕೀರ್ತಿ ಇಂದ್ರ ಮತ್ತು ಜಯರಾಜ್ ಪುತ್ತಿಲ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಪ್ರಮೋದ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಿಯೋಜಿತ ಅಧ್ಯಕ್ಷ ವೀರೇಂದ್ರ ಎಂ. ಸಿದ್ದಕಟ್ಟೆ ಅತಿಥಿಗಳನ್ನು ಸ್ವಾಗತಿಸಿದರು. ಆಕರ್ಷ್ ಜೈನ್ ಧನ್ಯವಾದ ಅರ್ಪಿಸಿದರು. ಸುಜನ್ ಜೈನ್ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

Mangalore Diocese Clergy Retreat Concludes at Shanthi Kiran

The first batch of the Annual Clergy Retreat 2026 of the Diocese of Mangalore concluded on Friday, July 10, at
News

Father Muller Ushers in a New Era of Precision Orthopaedics with the Region’s First STRYKER–USA MAKO SmartRobotics™ System

Father Muller Medical College Hospital has once again reaffirmed its commitment to pioneering excellence in healthcare with the commissioning of

You cannot copy content of this page