August 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವಿರೋಧ ಆಯ್ಕೆ

ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಆಲಿ ವಿಟ್ಲ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾರ್ಗದರ್ಶನದಲ್ಲಿ ಸಂಘದ ಚುನಾವಣಾ ಪ್ರಕ್ರಿಯೆಗಳು ನಡೆಸಲಾಯಿತು. ಚುನಾವಣಾಧಿಕಾರಿ ಸುರೇಶ್ ಡಿ. ಪಳ್ಳಿ ಅವರು ಅವಿರೋಧವಾಗಿ ಆಯ್ಕೆಯಾದ ನೂತನ ಆಡಳಿತ ಮಂಡಳಿಯನ್ನು ಅಧಿಕೃತವಾಗಿ ಘೋಷಿಸಿದರು. ಸಂಘದ ಅಧ್ಯಕ್ಷ ಸೇರಿದಂತೆ ಐದು ಪದಾಧಿಕಾರಿಗಳ ಸ್ಥಾನಗಳು ಹಾಗೂ ಐದು ಕಾರ್ಯಕಾರಿ ಸಮಿತಿ ಸದಸ್ಯರ ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಒಟ್ಟು 10 ಸ್ಥಾನಗಳಿಗೆ 10 ನಾಮಪತ್ರಗಳು ಮಾತ್ರ ಸಲ್ಲಿಕೆಯಾಗಿದ್ದರಿಂದ, ನಾಮಪತ್ರಗಳ ಪರಿಶೀಲನೆ ಹಾಗೂ ಹಿಂತೆಗೆತದ ನಿಗದಿತ ಅವಧಿಯ ಬಳಿಕ ಎಲ್ಲಾ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾದವರಾಗಿ ಘೋಷಿಸಲಾಯಿತು.

ಕೋಶಾಧಿಕಾರಿಯಾಗಿ ಚಂದ್ರಶೇಖರ ಕಲ್ಮಲೆ, ಉಪಾಧ್ಯಕ್ಷರಾಗಿ ರಮೇಶ್ ಕೆ. ಪುಣಚ ಹಾಗೂ ಕಾರ್ಯದರ್ಶಿಯಾಗಿ ಅಬ್ದುಲ್ ರಹಿಮಾನ್ ತಲಪಾಡಿ ಅವರು ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಗೆ ವೆಂಕಟೇಶ್ ಬಂಟ್ವಾಳ, ರತ್ನದೇವ್ ಪುಂಜಾಲಕಟ್ಟೆ, ಉದಯಶಂಕರ ನೀರ್ಪಾಜೆ, ವಾಮನ ಪೊಳಲಿ ಹಾಗೂ ಮೌನೇಶ್ ವಿಶ್ವಕರ್ಮ ಅವರು ಆಯ್ಕೆಯಾದರು.

ಈ ಸಂದರ್ಭ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್. ಅವರು ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಸುರೇಶ್ ಡಿ. ಪಳ್ಳಿ, ಸಹಾಯಕ ಚುನಾವಣಾಧಿಕಾರಿ ಜಯಶ್ರೀ ನವೀನ್, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಸಂದೀಪ್ ಸಾಲ್ಯಾನ್ ಸೇರಿದಂತೆ ಪತ್ರಕರ್ತರಾದ ಗಣೇಶ್ ಪ್ರಸಾದ್ ಪಾಂಡೇಲು, ಕಿಶೋರ್ ಪೆರಾಜೆ, ಕಿರಣ್ ಸರಪಾಡಿ, ಹರೀಶ್ ಮಾಂಬಾಡಿ, ಯಾದವ ಅಗ್ರಬೈಲು ಮೊದಲಾದವರು ಉಪಸ್ಥಿತರಿದ್ದರು.

You may also like

News

ತ್ರಿಷಾ ಸಂಸ್ಥೆಯ 28ನೇ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ತ್ರಿಷಾ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್‌ನ 28ನೇ ಸಂಸ್ಥಾಪನಾ ದಿನಾಚರಣೆ ಬಲ್ಮಠದ ಡಾನ್ ಬಾಸ್ಕೊ ಸಭಾಂಗಣದಲ್ಲಿ ಸಂಭ್ರಮ ಹಾಗೂ ವೈಭವದಿಂದ ನಡೆಯಿತು. ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸ್ವಾಗತ
News

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ‘ನರ್ಚರ್ 2026’ – ಮಕ್ಕಳ ರಾಷ್ಟ್ರೀಯ ವೈದ್ಯಕೀಯ ವಿಚಾರ ಸಂಕಿರಣ

ಫಾದರ್ ಮುಲ್ಲರ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದ ವತಿಯಿಂದ ನರ್ಚರ್ 2026 – ಮಕ್ಕಳ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು

You cannot copy content of this page