September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ – 400 ಗ್ರಾಂ ನಿಷೇಧಿತ ಗಾಂಜಾ ವಶ, ಆರೋಪಿಯ ಬಂಧನ

ಪುತ್ತೂರು ಕಸಬಾ ಗ್ರಾಮದ ಪರ್ಲಡ್ಕ ಜಂಕ್ಷನ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆ PSI ಜನಾರ್ಧನ ಕೆ.ಎಂ. ಅವರು ಸಿಬ್ಬಂದಿಗಳೊಂದಿಗೆ ಜನವರಿ 01ರಂದು ಗುರುವಾರ ಬೆಳಿಗ್ಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರು ಕಸಬಾ ಗ್ರಾಮ ನಿವಾಸಿ 36 ವರ್ಷ ಪ್ರಾಯದ ಮಹಮ್ಮದ್ ತೌಸೀಫ್ ಎಂದು ಗುರುತಿಸಲಾಗಿದೆ. ವಿಚಾರಣೆ ವೇಳೆ ತನ್ನ ಬಳಿ ನಿಷೇಧಿತ ಗಾಂಜಾ ಹೊಂದಿರುವುದಾಗಿ ಆರೋಪಿಯು ಒಪ್ಪಿಕೊಂಡಿದ್ದಾನೆ. ತಪಾಸಣೆ ನಡೆಸಿದಾಗ ಅವನ ಬಳಿ ಒಟ್ಟು 400 ಗ್ರಾಂ ಗಾಂಜಾ ಪತ್ತೆಯಾಗಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 02/2026 ಅಡಿ, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8(ಸಿ) ಹಾಗೂ 20(ಬಿ)ರಂತೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page