September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

14 ಕ್ರಿಮಿನಲ್ ಪ್ರಕರಣಗಳ ಆರೋಪಿ ಗಣೇಶ ಪೂಜಾರಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು

ವಿಟ್ಲ ಪೊಲೀಸ್ ಠಾಣಾಧಿಕಾರಿಗಳ ವರದಿಯ ಆಧಾರ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ಮನೆ ನಿವಾಸಿ ಗಣೇಶ @ ಗಣೇಶ ಪೂಜಾರಿ ವಿರುದ್ಧ ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು ಹಾಗೂ ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಗಳು ಒಟ್ಟು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ, ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವಂತೆ ಆದೇಶಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾಧಿಕಾರಿಗಳ ವರದಿಯ ಆಧಾರದ ಮೇಲೆ ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿ, ಮಂಗಳೂರು ಅವರು ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡುವ ಆದೇಶ ಹೊರಡಿಸಿದ್ದಾರೆ.

ಸಹಾಯಕ ಆಯುಕ್ತರ ಆದೇಶದಂತೆ ಗಣೇಶ ಪೂಜಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸುರಕ್ಷಿತವಾಗಿ ಆಲೂರು ಪೊಲೀಸ್ ಠಾಣೆಗೆ ಕಳುಹಿಸಲಾಗಿದೆ. ಈ ಕ್ರಮದಿಂದ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ನೆರವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page