August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನವರಿ 10ರಂದು ನರಿಂಗಾನದಲ್ಲಿ ಭವ್ಯ ಹೊನಲು ಬೆಳಕಿನ ಲವಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ–2026’

ನರಿಂಗಾನ ಕಂಬಳ ಸಮಿತಿ ಆಶ್ರಯದಲ್ಲಿ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಾಲ್ಕನೇ ವರ್ಷದ ಹೊನಲು ಬೆಳಕಿನ ಲವಕುಶ ಜೋಡುಕರೆ ನರಿಂಗಾನ ಕಂಬಳೋತ್ಸವ–2026 ಜನವರಿ 10ರಂದು ಶನಿವಾರ ಬೆಳಗ್ಗೆ 9 ಗಂಟೆಗೆ ಅದ್ದೂರಿಯಾಗಿ ನಡೆಯಲಿದೆ.

ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಕಂಬಳೋತ್ಸವವನ್ನು ಉದ್ಘಾಟಿಸಲಿದ್ದು, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ದೀಪ ಬೆಳಗಿಸುವರು. ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ನವಾಝ್ ನರಿಂಗಾನ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಶಾಂತಿಪಳಿಕೆಯ ಪ್ರಧಾನ ತಂತ್ರಿ ವೇ. ಮೂ. ವರ್ಕಾಡಿ ಹೊಸಮನೆ ರಾಜೇಶ್ ತಾಳಿತ್ತಾಯರು, ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಾದ ದರ್ಶನ್ ಎಚ್.ವಿ., ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ನರ್ವಡೆ ವಿನಾಯಕ್ ಕಾರ್ಭಾರಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

 

ಸಂಜೆ ನಡೆಯುವ ಸಭಾ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉದ್ಘಾಟಿಸಲಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ. ಪಾಟೀಲ್, ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ವಕ್ಫ್ ಮತ್ತು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ವಿವಿಧ ನಿಗಮ–ಮಂಡಳಿಗಳ ಅಧ್ಯಕ್ಷರು, ಉದ್ಯಮಿಗಳು ಹಾಗೂ ಧಾರ್ಮಿಕ ನಾಯಕರು ಉಪಸ್ಥಿತರಿರುತ್ತಾರೆ.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಕ್ರೀಡಾ ರತ್ನರು, ವಿಶ್ವಕಪ್ ವಿಜೇತ ಕ್ರೀಡಾಪಟುಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರನ್ನು ಸಾರ್ವಜನಿಕವಾಗಿ ಸನ್ಮಾನಿಸಲಾಗುವುದು. ಸ್ಯಾಂಡಲ್ ವುಡ್ ನಟ ರಿಷಬ್ ಶೆಟ್ಟಿ, ತುಳು ರಂಗಭೂಮಿಯಲ್ಲಿ ಮಿಂಚಿರುವ ರೂಪೇಶ್ ಶೆಟ್ಟಿ, ಅರವಿಂದ ಬೋಳಾರ್, ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ಪ್ರದೀಪ್ ಆಳ್ವ ಕದ್ರಿ, ಮಂಜು ಎಂ. ರೈ ಭಾಗವಹಿಸಲಿಕ್ಕಿದ್ದಾರೆ. ಸೇರಿದಂತೆ ಪ್ರಸಿದ್ಧ ಕಲಾವಿದರು ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಂಬಳ ಸ್ಪರ್ಧೆಯಲ್ಲಿ ಭಾಗವಹಿಸುವ ಕೋಣಗಳ ಯಜಮಾನರಿಗೆ ಬೆಳ್ಳಿಯ ಪದಕ ಹಾಗೂ ಟ್ರೋಫಿ ನೀಡಿ ಗೌರವಿಸಲಾಗುವುದು.

ಇದಕ್ಕೂ ಮುಂದಾಗಿ ಜನವರಿ 12ರಂದು ಸೋಮವಾರ ನರಿಂಗಾನ ಗ್ರಾಮ ಪಂಚಾಯತ್ ಆಶ್ರಯದಲ್ಲಿ ನರಿಂಗಾನ ಗ್ರಾಮೋತ್ಸವ ನಡೆಯಲಿದ್ದು, ಸ್ನೇಹ ಸಮ್ಮಿಲನ, ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ರಸಮಂಜರಿ ಹಾಗೂ ಕ್ರೀಡಾಕೂಟಗಳು ನಡೆಯಲಿವೆ. ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಪತ್ರಿಕಾಗೋಷ್ಠಿಯಲ್ಲಿ ಕಂಬಳ ಸಮಿತಿ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಮಿತ್ತಕೋಡಿ, ಪ್ರಧಾನ ಕಾರ್ಯದರ್ಶಿ ನವಾಝ್ ನರಿಂಗಾನ, ಕಣಚೂರು ಸಮೂಹ ಸಂಸ್ಥೆಯ ಚೇರ್‌ಮೆನ್ ಯು.ಕೆ. ಮೋನು ಹಾಗೂ ಉಪಾಧ್ಯಕ್ಷ ಮ್ಯಾಕ್ಸಿಂ ಡಿಸೋಜ ಉಪಸ್ಥಿತರಿದ್ದರು.

 

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page