August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಭಾಜಪ ಬೆಳ್ತಂಗಡಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ – ಮೋದಿ ಆಡಳಿತ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳ ಭಾಜಪ ಸೇರ್ಪಡೆ

ಬೆಳ್ತಂಗಡಿ ಮಂಡಲ ಭಾರತೀಯ ಜನತಾ ಪಾರ್ಟಿಯ ವಿಶೇಷ ಕಾರ್ಯಕಾರಿಣಿ ಸಭೆಯು ಜನವರಿ 5ರಂದು ಸೋಮವಾರ ಜೈನ್ ಪೇಟೆಯ ಕಿನ್ನಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತ ಕಾರ್ಯವೈಖರಿಯನ್ನು ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್ ಹಾಗೂ ಪ್ರಸನ್ನ ಕುಮಾರ್ ಅವರು ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಗೆ ಸೇರ್ಪಡೆಗೊಂಡರು.

ಸಭೆಯಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ಹಾಗೂ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಸೀತಾರಾಮ ಬೆಳಾಲು ಹಾಗೂ ವಸಂತಿ ಮಚ್ಚಿನ ಉಪಸ್ಥಿತರಿದ್ದರು.

ಸಭೆಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಕ್ಷದ ಸಂಘಟನೆ ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಿದರು.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page