August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ತೀವ್ರ ಖಂಡನೆ

ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿರುವುದನ್ನು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಶಾಸಕಿ ಭಾಗೀರಥಿ ಮುರುಳ್ಯ ಅವರು ಶೋಷಿತ ಸಮುದಾಯದಿಂದ ಬಂದವರಾಗಿದ್ದು, ಅತ್ಯಂತ ಸಜ್ಜನಿಕೆಯಿಂದ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಜನಪ್ರತಿನಿಧಿಯ ಬಗ್ಗೆ, ಅದರಲ್ಲೂ ಮಹಿಳಾ ಶಾಸಕಿಯ ವಿರುದ್ಧ ಕೀಳುಮಟ್ಟದ ಮತ್ತು ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿರುವುದು ಅತ್ಯಂತ ಖಂಡನೀಯ ಹಾಗೂ ಅಸಹ್ಯಕರ ಎಂದು ಹೇಳಿದ್ದಾರೆ.

ವಿವೇಕವಿಲ್ಲದ ಅಭಿವ್ಯಕ್ತಿಗಳು ಮತ್ತು ಸಂಸ್ಕಾರ ರಹಿತ ಟೀಕೆಗಳನ್ನು ನಾಗರಿಕ ಸಮಾಜ ಎಂದಿಗೂ ಒಪ್ಪಲಾರದು. ಈ ರೀತಿಯ ಪೋಸ್ಟ್‌ಗಳು ವಿಕೃತ ಮನೋಭಾವ ಹಾಗೂ ಕೆಟ್ಟ ಆಲೋಚನೆಗಳ ಪ್ರತಿಬಿಂಬವಾಗಿದ್ದು, ಜಾಲತಾಣಗಳಲ್ಲಿ ಜನಪ್ರತಿನಿಧಿಗಳ ತೇಜೋವಧೆ ಮಾಡುವುದು ಅತ್ಯಂತ ಗಂಭೀರ ವಿಚಾರವಾಗಿದೆ ಎಂದು ಕ್ಯಾಪ್ಟನ್ ಚೌಟ ಅವರು ಅಭಿಪ್ರಾಯಪಟ್ಟಿದ್ದಾರೆ.

ಸಮಾಜದ ಸ್ವಾಸ್ಥ್ಯವನ್ನು ಹಾಳುಮಾಡುವ ಇಂತಹ ಕೃತ್ಯಗಳು ಕೇವಲ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತವೆ. ಸಾಮಾಜಿಕ ಜಾಲತಾಣಗಳನ್ನು ಸದುಪಯೋಗಪಡಿಸಿಕೊಳ್ಳುವ ಬದಲು ವ್ಯಕ್ತಿತ್ವ ಹರಣಕ್ಕೆ ಬಳಸುತ್ತಿರುವುದು ಅತ್ಯಂತ ವಿಷಾದನೀಯ ಎಂದು ಅವರು ಹೇಳಿದ್ದಾರೆ.

You may also like

News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ
News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.

You cannot copy content of this page