April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜಿಲ್ಲೆಯಾದ್ಯಂತ ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮ

ಡಿಜಿಟಲ್ ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ವಿವಿಧ ಉಪನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮವು ಜನವರಿ 9ರಂದು ಮಧ್ಯಾಹ್ನ 12.00 ಗಂಟೆಗೆ ಪುತ್ತೂರು ಉಪನೋಂದಣಿ ಕಚೇರಿಯಲ್ಲಿ ಹಾಗೂ ಸಂಜೆ 4.00 ಗಂಟೆಗೆ ಸುಳ್ಯ ಉಪನೋಂದಣಿ ಕಚೇರಿಯಲ್ಲಿ ನಡೆಯಲಿದೆ. ಜನವರಿ 10ರಂದು ಮಧ್ಯಾಹ್ನ 12.00 ಗಂಟೆಗೆ ಮಂಗಳೂರು ನಗರ ಕೇಂದ್ರೀಯ ಉಪನೋಂದಣಿ ಕಚೇರಿ ಹಾಗೂ ಅದೇ ದಿನ ಮಧ್ಯಾಹ್ನ 12.00 ಗಂಟೆಗೆ ಮಂಗಳೂರು ತಾಲೂಕು ಉಪನೋಂದಣಿ ಕಚೇರಿಯಲ್ಲಿ ತರಬೇತಿ ನಡೆಯಲಿದೆ.

ಜನವರಿ 12ರಂದು ಮಧ್ಯಾಹ್ನ 12.00 ಗಂಟೆಗೆ ಬೆಳ್ತಂಗಡಿ ಉಪನೋಂದಣಿ ಕಚೇರಿಯಲ್ಲಿ, ಸಂಜೆ 4.00 ಗಂಟೆಗೆ ಬಂಟ್ವಾಳ ಉಪನೋಂದಣಿ ಕಚೇರಿ ಹಾಗೂ ವಿಟ್ಲ ಉಪನೋಂದಣಿ ಕಚೇರಿಯಲ್ಲಿ ತರಬೇತಿ ಆಯೋಜಿಸಲಾಗಿದೆ. ಅಲ್ಲದೆ ಜನವರಿ 13ರಂದು ಮಧ್ಯಾಹ್ನ 12.00 ಗಂಟೆಗೆ ಮೂಲ್ಕಿ ಉಪನೋಂದಣಿ ಕಚೇರಿಯಲ್ಲಿ ಹಾಗೂ ಸಂಜೆ 4.00 ಗಂಟೆಗೆ ಮೂಡುಬಿದಿರೆ ಉಪನೋಂದಣಿ ಕಚೇರಿಯಲ್ಲಿ ತರಬೇತಿ ನಡೆಯಲಿದೆ.

ಈ ತರಬೇತಿಯ ಸದುಪಯೋಗವನ್ನು ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಹಾಗೂ ಸೌಹಾರ್ದ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಪಡೆದುಕೊಳ್ಳಬಹುದು. ತರಬೇತಿ ನಡೆಯುವ ಸ್ಥಳ ಮತ್ತು ಸಮಯದ ವಿವರಗಳನ್ನು ಸಂಬಂಧಿಸಿದ ಉಪನೋಂದಣಿ ಅಧಿಕಾರಿಗಳಿಂದ ತಿಳಿದುಕೊಂಡು ತರಬೇತಿಗೆ ಹಾಜರಾಗುವಂತೆ ದಕ್ಷಿಣ ಕನ್ನಡ ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page