April 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಿಒಡಿಪಿ ಸಂಸ್ಥೆಯಲ್ಲಿ ಒಕ್ಕೂಟ ಬಲವರ್ಧನೆ ತರಬೇತಿ ಯಶಸ್ವಿ

ಜನವರಿ 8ರಂದು ಗುರುವಾರ ಮಹಿಳಾ ಸಬಲೀಕರಣ ಯೋಜನೆಯಡಿಯಲ್ಲಿ ಮಿಸೋರಿಯರ್ ಮತ್ತು ಬೆಂಗಳೂರು ಕ್ರಾಸ್ ಸಂಸ್ಥೆಗಳ ಸಹಯೋಗದೊಂದಿಗೆ ಸಿಒಡಿಪಿ ಸಂಸ್ಥೆಯಲ್ಲಿ ಒಕ್ಕೂಟ ಬಲವರ್ಧನೆ ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸಮೃದ್ಧಿ ಜಿಲ್ಲಾ ಒಕ್ಕೂಟದ ಅಧ್ಯಕ್ಷರಾದ ಜಯಶ್ರೀ ಅವರು ವಹಿಸಿದ್ದರು. ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಸ್ವಸಹಾಯ ಸಂಘದ ಸದಸ್ಯರು ತಮ್ಮ ಸ್ವಪ್ರೇರಣೆ ಮತ್ತು ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಒಕ್ಕೂಟದ ಬಲವರ್ಧನೆಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಮ್ಮ ಸಂದೇಶದಲ್ಲಿ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಶಿವಮೊಗ್ಗದ SMSS ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನಾ ಸಂಯೋಜಕರಾದ ಜಗದೀಶ್ ಅವರು ಉಪಸ್ಥಿತರಿದ್ದು, ಒಕ್ಕೂಟಗಳ ಕಾರ್ಯವಿಧಾನ, ಜವಾಬ್ದಾರಿಗಳು ಹಾಗೂ ಸಂಘಟನಾ ಬಲವರ್ಧನೆ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಜೀವನ್ ರಕ್ಷಾ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷರಾದ ಸೀಮಾ ಅವರು ಹಾಗೂ ಮಹಿಳಾ ಸಬಲೀಕರಣ ಯೋಜನಾ ಸಂಯೋಜಕರಾದ ಸುಪ್ರಿಯಾ ಅವರು ಉಪಸ್ಥಿತರಿದ್ದರು.

ಈ ತರಬೇತಿಯಲ್ಲಿ ಸಿಒಡಿಪಿ ಸಂಸ್ಥೆಯ ಅಧೀನದಲ್ಲಿರುವ ಒಕ್ಕೂಟಗಳು, ಮಹಾಸಂಘಗಳ ಪ್ರತಿನಿಧಿಗಳು ಹಾಗೂ ಮಹಿಳಾ ಸಬಲೀಕರಣ ಯೋಜನೆಯ ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಸುಪ್ರಿಯಾ ಅವರು ಎಲ್ಲರನ್ನು ಸ್ವಾಗತಿಸಿ, ಜಯಶ್ರೀ ಅವರು ವಂದನಾರ್ಪಣೆ ಸಲ್ಲಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಜಸಿಂತಾ ಅವರು ಸಮರ್ಥವಾಗಿ ನೆರವೇರಿಸಿದರು.

You may also like

News

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ – ಏಪ್ರಿಲ್ 18ಕ್ಕೆ ಪೂರ್ವಭಾವಿ ಸಭೆ ಹಾಗೂ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ವತಿಯಿಂದ ಬ್ಯಾರಿ ಸಾಹಿತ್ಯ ಪರಿಷತ್ ಬಂಟ್ವಾಳ ಘಟಕದ ಸಹಯೋಗದಲ್ಲಿ ಮೇ 12ರಂದು ನಡೆಯಲಿರುವ ‘ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ’ದ ಸಿದ್ಧತೆಗಳು
News

ಮಂಗಳೂರು ಧರ್ಮಕ್ಷೇತ್ರದ ವಿವಿಧ ಧರ್ಮಗುರುಗಳ 2026 ನೇ ಸಾಲಿನ ವರ್ಗಾವಣೆ ಪಟ್ಟಿ ಪ್ರಕಟ

ಬಿಷಪ್ ಪರಮ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರ ಆದೇಶ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

You cannot copy content of this page