August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲದಲ್ಲಿ ಇಂದು ಜನವರಿ 12ರಂದು ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮ

ವಿಟ್ಲ ಉಪನೋಂದಣಾಧಿಕಾರಿ ಬಿಂದುಮಣಿ ಶರ್ಮ ಅವರಿಂದ ಪತ್ರಿಕಾ ಪ್ರಕಟಣೆ

ಡಿಜಿಟಲ್ ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಉಪನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಭಾಗವಾಗಿ ವಿಟ್ಲ ಉಪನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಇಂದು ಜನವರಿ 12ರಂದು ಸೋಮವಾರ ಸಂಜೆ 4.00 ಗಂಟೆಗೆ ಬಂಟ್ವಾಳ ತಾಲೂಕು ಆಡಳಿತ ಸೌಧದ ಸಬಾಂಗಣದಲ್ಲಿ ಡಿಜಿಟಲ್ ಇ–ಸ್ಟ್ಯಾಂಪ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ತರಬೇತಿ ಕಾರ್ಯಕ್ರಮದಲ್ಲಿ ಇ–ಸ್ಟ್ಯಾಂಪ್ ಮಾರಾಟ ವ್ಯವಸ್ಥೆಯನ್ನು ನಿರ್ವಹಿಸುತ್ತಿರುವ ಸಹಕಾರಿ ಹಾಗೂ ಸೌಹಾರ್ದ ಸಂಸ್ಥೆಗಳ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಬಹುದು. ವಿಟ್ಲ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಬಂಧಿತ ಸಂಸ್ಥೆಗಳ ಸಿಬ್ಬಂದಿಗಳು ಈ ತರಬೇತಿಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ತರಬೇತಿ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಟ್ಲ ಉಪನೋಂದಣಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ವಿಟ್ಲ ಉಪನೋಂದಣಾಧಿಕಾರಿ ಬಿಂದುಮಣಿ ಶರ್ಮ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page