August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜನವರಿ 16ರಿಂದ 25ರವರೆಗೆ ಕಾಜೂರು ಮಖಾಂ ಉರೂಸ್ – ಪೊಲೀಸ್ ಇಲಾಖೆ ಜೊತೆ ಶಾಂತಿ–ಸಮನ್ವಯ ಸಭೆ

ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಉರೂಸ್ ಕಾರ್ಯಕ್ರಮವು ಜನವರಿ 16ರಿಂದ 25ರವರೆಗೆ ನಡೆಯಲಿದ್ದು, ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜನವರಿ 9ರಂದು ಶುಕ್ರವಾರ ಪೊಲೀಸ್ ಇಲಾಖೆ ಹಾಗೂ ಉರೂಸ್ ಸಮಿತಿಯವರೊಂದಿಗೆ ಸಮನ್ವಯ ಶಾಂತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು, ಉರೂಸ್ ಸಂದರ್ಭದಲ್ಲಿ ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿರುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕ ಸುರಕ್ಷತೆ, ಸಂಚಾರ ವ್ಯವಸ್ಥೆ ಮತ್ತು ಕಾನೂನು ಪಾಲನೆಗೆ ವಿಶೇಷ ಗಮನ ನೀಡಲಾಗುವುದು ಎಂದು ಹೇಳಿದರು.

ವಾಹನ ಸಂಚಾರಕ್ಕೆ ಅಡ್ಡಿಯಾಗದಂತೆ ನಿಗದಿತ ಪಾರ್ಕಿಂಗ್ ಸ್ಥಳಗಳಲ್ಲೇ ವಾಹನ ನಿಲುಗಡೆ ಮಾಡಬೇಕು. ರಸ್ತೆ ಬದಿಗಳಲ್ಲಿ ವಾಹನ ನಿಲ್ಲಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗುತ್ತದೆ. ಆಯ್ದ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು ಇರಿಸಲಾಗುವುದು. ಉರೂಸ್ ನಡೆಯುವ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ನಿರಂತರ ನಿಗಾ ವಹಿಸಲಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಅಥವಾ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಂದೇಶಗಳನ್ನು ಹರಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.

ದರ್ಗಾ ಸಮಿತಿಯು ನೇಮಿಸುವ ಸ್ವಯಂಸೇವಕರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಜನದಟ್ಟಣೆಯನ್ನು ನಿಯಂತ್ರಿಸಲು ಸಹಕರಿಸಬೇಕು. ಕಾರ್ಯಕ್ರಮದ ವೇಳೆ ಯಾವುದೇ ಅನುಮಾನಾಸ್ಪದ ವ್ಯಕ್ತಿಗಳು ಅಥವಾ ವಸ್ತುಗಳು ಕಂಡುಬಂದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಸಿಬ್ಬಂದಿಗೆ ಅಥವಾ ಸಹಾಯವಾಣಿಗೆ ಮಾಹಿತಿ ನೀಡುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಬೆಳ್ತಂಗಡಿ ಡಿವೈಎಸ್‌ಪಿ ರೋಹಿಣಿ ಸಿ.ಕೆ., ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ. ಸುಬ್ಬಾಪುರಮಠ ಸೇರಿದಂತೆ ಅಧಿಕಾರಿಗಳು, “ಉರೂಸ್ ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕ. ಭಕ್ತಾದಿಗಳು ಹಾಗೂ ಸಾರ್ವಜನಿಕರು ಕಾನೂನು ಪಾಲಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಈ ಶಾಂತಿ ಸಭೆಯಲ್ಲಿ ದರ್ಗಾ ಸಮಿತಿಯ ಪದಾಧಿಕಾರಿಗಳು, ಕಾಜೂರು–ಕಿಲ್ಲೂರು ಜಂಟಿ ಉರೂಸ್ ಸಮಿತಿಯ ಪ್ರತಿನಿಧಿಗಳು ಹಾಗೂ ಸರ್ವಧರ್ಮಗಳ ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page