October 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ರೋಹನ್ ಕಾರ್ಪೊರೇಷನ್‌ಗೆ 32 ವರ್ಷಗಳ ಸಂಭ್ರಮ

ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರೈಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಹಾಗೂ ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.

ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಇದರೊಂದಿಗೆ 16 ಹೊಸ ಯೋಜನೆಗಳು ಕೂಡಾ ಪ್ರಾರಂಭಿಕ ನಿರ್ಮಾಣ ಹಂತದಲ್ಲಿವೆ. ವಸತಿ ಮತ್ತು ವಾಣಿಜ್ಯ ಕ್ಷೇತ್ರಗಳನ್ನು ಒಳಗೊಂಡ ಈ ಯೋಜನೆಗಳು ಮಂಗಳೂರಿನ ನಗರಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿವೆ.

ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ಅವರು, “ಮಂಗಳೂರಿನ ಬೆಳವಣಿಗೆಯಲ್ಲಿ ನಮ್ಮಿಂದಾದಷ್ಟು ಕೊಡುಗೆ ನೀಡಲು ಅವಕಾಶ ದೊರೆತಿರುವುದು ನಮಗೆ ಅಪಾರ ಹೆಮ್ಮೆಯ ವಿಷಯ. ಈ 32 ವರ್ಷದ ಪಯಣ ಅತ್ಯಂತ ತೃಪ್ತಿದಾಯಕವಾಗಿದೆ. ವರ್ಷಗಳ ಕಾಲ ನಮ್ಮೊಂದಿಗೆ ನಿಂತು ಬೆಂಬಲಿಸಿದ ಗ್ರಾಹಕರು, ಪಾಲುದಾರರು ಹಾಗೂ ಸಿಬ್ಬಂದಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ,” ಎಂದು ಹೇಳಿದರು.

ನಿರ್ದೇಶಕ ಡಿಯಾನ್ ಮೊಂತೆರೊ ಅವರು ಮಾತನಾಡಿ, “32 ವರ್ಷಗಳ ಸಾಧನೆ ಕೇವಲ ಒಂದು ಸಂಸ್ಥೆಯ ಯಶಸ್ಸಲ್ಲ; ಇದು ನಮ್ಮ ಗ್ರಾಹಕರು, ಪಾಲುದಾರರು ಹಾಗೂ ಸಿಬ್ಬಂದಿ ನಮ್ಮ ಮೇಲಿಟ್ಟಿರುವ ವಿಶ್ವಾಸದ ಪ್ರತಿಬಿಂಬವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೊಣೆಗಾರಿಕೆ, ಗುಣಮಟ್ಟ ಹಾಗೂ ಮೌಲ್ಯಗಳೊಂದಿಗೆ ಕಾರ್ಯನಿರ್ವಹಿಸುವ ಸಂಕಲ್ಪ ನಮ್ಮದು,” ಎಂದು ತಿಳಿಸಿದರು. ಗುಣಮಟ್ಟ ಮತ್ತು ವಿಶ್ವಾಸಾರ್ಹತೆಯನ್ನು ಮೂಲಮಂತ್ರವಾಗಿಸಿಕೊಂಡು ಮುಂದುವರಿಯುತ್ತಿರುವ ರೋಹನ್ ಕಾರ್ಪೊರೇಷನ್, ಮಂಗಳೂರಿನ ನಗರಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

You may also like

News

ಉಪ್ಪಿನಂಗಡಿಯಲ್ಲಿ ಸಾರ್ವಜನಿಕವಾಗಿ ತಲವಾರು ಪ್ರದರ್ಶನ – ಇಬ್ಬರು ಪೊಲೀಸ್ ವಶಕ್ಕೆ

ಉಪ್ಪಿನಂಗಡಿ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆಯಾದ ವೇಳೆ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಭೀತಿ ಉಂಟುಮಾಡಿದ ಆರೋಪದಡಿ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಕ್ಟೋಬರ್
News

ಬಂಟ್ವಾಳದಲ್ಲಿ ಸಾಲದ ಹಣದ ವಿವಾದ: ಅಣ್ಣನಿಗೆ ಚಾಕು ಇರಿತ, ತಮ್ಮನ ಮೇಲೆ ಹಲ್ಲೆಗೆ ಯತ್ನ – ಆರೋಪಿ ಅಜಿತ್ ಪೊಲೀಸ್ ವಶಕ್ಕೆ

ಸಾಲವಾಗಿ ನೀಡಿದ್ದ ಹಣವನ್ನು ವಾಪಸ್ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಅಣ್ಣನಿಗೆ ಚಾಕುವಿನಿಂದ ಇರಿದು, ತಮ್ಮನ ಮೇಲೂ ಹಲ್ಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಿ. ಮೂಡ ಗ್ರಾಮದ

You cannot copy content of this page