July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಾಜೆಯಲ್ಲಿ ರಾಜ್ಯಮಟ್ಟದ ದಫ್ ಸ್ಪರ್ಧೆ, ನೂತನ ಕಚೇರಿ ಉದ್ಘಾಟನೆ ಹಾಗೂ ಐಕ್ಯತಾ ಜಸ್ನೇ – 2K26

ಜನವರಿ 18ರಂದು ವೈಭವದ ಕಾರ್ಯಕ್ರಮ

ಐಕ್ಯ ವೇದಿಕೆ (ರಿ.) ಕೊಡಾಜೆ ಇದರ ಆಶ್ರಯದಲ್ಲಿ ರಾಜ್ಯಮಟ್ಟದ ದಫ್ ಸ್ಪರ್ಧೆ, ನೂತನ ಕಚೇರಿ ಉದ್ಘಾಟನೆ, ಸನ್ಮಾನ ಹಾಗೂ ಐಕ್ಯತಾ ಜಸ್ನೇ–2026 ಕಾರ್ಯಕ್ರಮವು ಜನವರಿ 18ರಂದು ಭಾನುವಾರ ಬೆಳಗ್ಗೆ 10ರಿಂದ ಕೊಡಾಜೆ ತರ್ಬಿಯತುಲ್ ಇಸ್ಲಾಂ ಮದ್ರಸ ವಠಾರದ ಮರ್ಹೂಮ್ ಸುಲ್ತಾನ್ ಹಾಜಿ ವೇದಿಕೆಯಲ್ಲಿ ನಡೆಯಲಿದೆ.

ಬೆಳಿಗ್ಗೆ 10ಕ್ಕೆ ಕೊಡಾಜೆ ಜಂಕ್ಷನ್‌ನಲ್ಲಿ ಐಕ್ಯ ವೇದಿಕೆಯ ನೂತನ ಕಚೇರಿಯನ್ನು ಅಸ್ಸಯ್ಯಿದ್ ಇಬ್ರಾಹಿಂ ಹಂಝ ಅಲ್ ಹಾದಿ ತಂಙಳ್ ಪಾಟ್ರಕೋಡಿ ಉದ್ಘಾಟಿಸಲಿದ್ದು, ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 3ಕ್ಕೆ ನಡೆಯುವ “ಐಕ್ಯತಾ ಜಸ್ನೇ” ಕಾರ್ಯಕ್ರಮವನ್ನು ಪರ್ಲೊಟ್ಟು ಅಬೂಬಕ್ಕರ್ ಸಿದ್ದೀಕ್ ಜುಮಾ ಮಸೀದಿ ಖತೀಬ್ ಸೈದಾಲಿ ಮುಸ್ಲಿಯಾರ್ ಉದ್ಘಾಟಿಸಲಿದ್ದು, ಐಕ್ಯ ವೇದಿಕೆ ಉಪಾಧ್ಯಕ್ಷ ಅಬ್ದುಲ್ ರಝಾಕ್ ಅನಂತಾಡಿ ಅಧ್ಯಕ್ಷತೆ ವಹಿಸುವರು.

ಸಂಜೆ 6.30ಕ್ಕೆ ನಡೆಯುವ ರಾಜ್ಯಮಟ್ಟದ ದಫ್ ಸ್ಪರ್ಧೆ ಹಾಗೂ ಸನ್ಮಾನ ಸಮಾರಂಭವನ್ನು ಕೊಡಾಜೆ ಬದ್ರಿಯಾ ಜುಮಾ ಮಸೀದಿ ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಲ ಉದ್ಘಾಟಿಸಲಿದ್ದು, ಐಕ್ಯ ವೇದಿಕೆ ಅಧ್ಯಕ್ಷ ಅಶ್ರಫ್ ಭಾರತ್ ಅಧ್ಯಕ್ಷತೆ ವಹಿಸುವರು. ಸಮಾರೋಪ ಸಮಾರಂಭಕ್ಕೆ ಐಕ್ಯ ವೇದಿಕೆಯ ಸ್ಥಾಪಕಾಧ್ಯಕ್ಷ ಹಾಗೂ ಸಲಹೆಗಾರ ಫಾರೂಕ್ ಗೋಳಿಕಟ್ಟೆ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಬಿ. ರಮಾನಾಥ ರೈ, ವಿಟ್ಲ ಪೊಲೀಸ್ ಠಾಣಾ ನಿರೀಕ್ಷಕ ಪ್ರಕಾಶ್ ದೇವಾಡಿಗ, ನೇರಳಕಟ್ಟೆ ಡಿ.ಕೆ. ಸ್ವಾಮಿ ಶ್ರದ್ದಾ ಕೇಂದ್ರದ ಡಿ.ಕೆ. ಸ್ವಾಮೀಜಿ ಹಾಗೂ ಗಡಿಯಾರ್ ಗ್ರೂಪ್ ಆಫ್ ಕಂಪೆನಿ ದುಬಾಯಿ ಇದರ ಚೇರ್ಮನ್ ಇಬ್ರಾಹಿಂ ಗಡಿಯಾರ್ ಭಾಗವಹಿಸುವರು.

ಇದೇ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಿ ವೈದ್ಯ ಸೋಮನಾಥ್ ಪಂಡಿತ್, ಕಲ್ಲಡ್ಕ ಮ್ಯೂಸಿಯಂ ಮಾಲಕ ಹಾಜಿ ಕೆ.ಎಸ್. ಯಾಸಿರ್ ಕಲ್ಲಡ್ಕ ಹಾಗೂ ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಅವರಿಗೆ ಸನ್ಮಾನ ನೆರವೇರಿಸಲಿದ್ದು, ವಿವಿಧ ಕ್ಷೇತ್ರಗಳ ಸಾಧಕರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಐಕ್ಯ ವೇದಿಕೆಯ ಸಾಂಸ್ಕೃತಿಕ ಕಾರ್ಯದರ್ಶಿ ಮನ್ಸೂರ್ ನೇರಳಕಟ್ಟೆ ಹಾಗೂ ಪತ್ರಿಕಾ ಕಾರ್ಯದರ್ಶಿ ನೌಫಳ್ ಕೊಡಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page