August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ – ಕದ್ರಿ ಪೊಲೀಸರ ದಾಳಿ, ಯುವಕ ಬಂಧನ – MDMA ಹಾಗೂ ಬೈಕ್ ವಶ

ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕನನ್ನು ಕದ್ರಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗಳಿಗೆ ಲಭಿಸಿದ ಖಚಿತ ಮಾಹಿತಿಯ ಮೇರೆಗೆ ಈ ಕಾರ್ಯಚರಣೆ ನಡೆಸಲಾಗಿದೆ.

ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮದ ಕೈಲಾಸ ಕಾಲೋನಿ ಹತ್ತಿರ, ಶ್ರೀ ದುರ್ಗಾ ಪರಮೇಶ್ವರಿ ಭಜನಾ ಮಂದಿರದ ಹಿಂದೆ ಇರುವ ಖಾಲಿ ಜಾಗದಲ್ಲಿ ಯುವಕನೊಬ್ಬನು ಬೈಕ್‌ನಲ್ಲಿ ನಿಷೇಧಿತ MDMA ಮಾದಕ ವಸ್ತುವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಬಂದಿತ್ತು. ಇದರ ಆಧಾರದ ಮೇಲೆ ಠಾಣಾಧಿಕಾರಿ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ಸಂದರ್ಭದಲ್ಲಿ ಆರೋಪಿಯಿಂದ 5.20 ಗ್ರಾಂ ತೂಕದ MDMA ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಪಲ್ಸರ್ ಎನ್‌ಎಸ್ ಬೈಕ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 70,000/- ಆಗಿದೆ.

ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಎರ್ನಾಕುಲಂ ಮುತೊಲಪುರಂ ಚುನಯಮಕ್ಕಿಲ್ ಹೌಸ್ ನಿವಾಸಿ 20 ವರ್ಷ ಪ್ರಾಯದ ಜೂಡ್ ಮಾಥ್ಯೂ ಎಂದು ಗುರುತಿಸಲಾಗಿದೆ. ಈ ಸಂಬಂಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

You may also like

News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.
News

“ಕರಾವಳಿಗೆ ಹೈಕೋರ್ಟ್ ಸಂಚಾರಿ ಪೀಠ – ಸಮಿತಿ ರಚನೆಗೆ ಸಿಜೆ ಭರವಸೆ”

ಬೆಂಗಳೂರು: ಕರಾವಳಿ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸಂಚಾರಿ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಸಮಿತಿ ರಚಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು

You cannot copy content of this page