August 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸುಲಿಗೆ ಪ್ರಕರಣ – ತಲೆಮರಿಸಿಕೊಂಡಿದ್ದ ವಾರಂಟ್ ಆರೋಪಿ ನವೀನ್ ಸಿಕ್ವೇರಾ ಬಂಧನ

ಸುಲಿಗೆ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಸಿಬ್ಬಂದಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಮಂಗಳೂರಿನ ಪೆರ್ಮನ್ನೂರು ತೊಕ್ಕೊಟ್ಟು ಚಂಬುಗುಡ್ಡೆ ನಿವಾಸಿ 52 ವರ್ಷ ಪ್ರಾಯದ ನವೀನ್ ಎಂದು ಗುರುತಿಸಲಾಗಿದೆ. ಈತನ ವಿರುದ್ಧ 2011 ಮತ್ತು 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರಂ 195/2011 ಕಲಂ 392 ಐಪಿಸಿ ಅಡಿಯಲ್ಲಿ ಸುಲಿಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015ರಲ್ಲಿ ನವೀನ್ ಸಿಕ್ವೇರಾಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂಪಾಯಿ 5,000 ದಂಡ ವಿಧಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಆರೋಪಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಸಲ್ಲಿಸಿದ್ದನು. ಅರ್ಜಿ ಪರಿಶೀಲಿಸಿದ ಉಚ್ಚ ನ್ಯಾಯಾಲಯವು, ಆರೋಪಿಗೆ ಒಂದು ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ರೂಪಾಯಿ 15,000 ದಂಡ ವಿಧಿಸಿ, ಈ ಶಿಕ್ಷೆಯನ್ನು 2022ರೊಳಗೆ ಅನುಭವಿಸುವಂತೆ ಆದೇಶಿಸಿತ್ತು. ಇದಕ್ಕೆ ವಿಫಲವಾದಲ್ಲಿ ಜಿಲ್ಲಾ ನ್ಯಾಯಾಲಯದ ಹಿಂದಿನ ಆದೇಶದಂತೆ ಶಿಕ್ಷೆ ಅನುಭವಿಸಬೇಕೆಂದು ಸೂಚಿಸಿತ್ತು.

ಆದರೆ ತೀರ್ಪು ಪ್ರಕಟವಾದ ಬಳಿಕ ಆರೋಪಿ ತಲೆಮರಿಸಿಕೊಂಡಿದ್ದ ಕಾರಣ ಮಾನ್ಯ ನ್ಯಾಯಾಲಯವು ಈತನ ವಿರುದ್ಧ ಬಂಧನ ವಾರೆಂಟ್ ಹೊರಡಿಸಿತ್ತು. ಅದರಂತೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ವಾರಂಟ್ ಜಾರಿ ಸಿಬ್ಬಂದಿಗಳಾದ ಎಎಸ್ಐ ಮಚ್ಚೇಂದ್ರನಾಥ್ ಜೋಗಿ, ಹೆಡ್ ಕಾನ್ಸ್ ಟೇಬಲ್ ಅಭಿಷೇಕ್ ಹಾಗೂ ಹೆಡ್ ಕಾನ್ಸ್ ಟೇಬಲ್ ನಾರಪ್ಪ ಕೆ.ಬಿ. ಅವರು ಜನವರಿ 14ರಂದು ಬುಧವಾರ ಖಚಿತ ಮಾಹಿತಿಯ ಮೇರೆಗೆ ಸುರತ್ಕಲ್ ಹೊನ್ನಕಟ್ಟೆಯ ಸುಪ್ರಭಾತ ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ಆರೋಪಿಯನ್ನು ಬಂಧಿಸಿದರು.

ಬಂಧಿತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಹಿಂದಿನ ಆದೇಶದಂತೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂಪಾಯಿ 5,000 ದಂಡ ವಿಧಿಸಿ ತೀರ್ಪು ನೀಡಿದೆ.

You may also like

News

ಸೆಪ್ಟೆಂಬರ್ 12ರಂದು ಬಂಟ್ವಾಳದಲ್ಲಿ ರಾಷ್ಟ್ರೀಯ ಲೋಕ ಅದಾಲತ್ – ರಾಜಿ ಮೂಲಕ ಪ್ರಕರಣಗಳ ಇತ್ಯರ್ಥಕ್ಕೆ ಅವಕಾಶ

ಬಾಕಿ ಉಳಿದಿರುವ ರಾಜಿಯಾಗಬಹುದಾದ ಪ್ರಕರಣಗಳನ್ನು ತ್ವರಿತವಾಗಿ ಮತ್ತು ಸೌಹಾರ್ದಯುತವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಸೆಪ್ಟೆಂಬರ್ 12ರಂದು ಬಂಟ್ವಾಳ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ
News

27 ವರ್ಷಗಳ ಸೇವೆಯ ಬಳಿಕ ಜೀವನ್ ಸಂತೋಷ್ ಮಾರ್ಟಿಸ್‌ ಅವರು KSRTC ಟ್ರಾಫಿಕ್ ಕಂಟ್ರೋಲರ್ ಹುದ್ದೆಗೆ ಬಡ್ತಿ

KSRTC ಪುತ್ತೂರು ವಿಭಾಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಮಾರ್ಟಿಸ್ ಕುಟುಂಬದ ಜೀವನ್ ಸಂತೋಷ್ ಮಾರ್ಟಿಸ್ ಅವರು ಟ್ರಾಫಿಕ್ ಕಂಟ್ರೋಲರ್ (ಸಂಚಾರ ನಿಯಂತ್ರಕ)

You cannot copy content of this page