August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನವುಂಡ ಪರಿಸರದಲ್ಲಿ ಚಿರತೆಗಳ ಓಡಾಟ – ನಾಯಿಯ ಮೇಲೆ ದಾಳಿ, ಅರಣ್ಯ ಇಲಾಖೆ ಬೋನು ಅಳವಡಿಕೆ

ಮಡಂತ್ಯಾರು ಇಲ್ಲಿನ ಮಾಲಾಡಿ ಗ್ರಾಮದ ಅಂತರ ನವುಂಡ ದೇವಸ್ಥಾನದ ಸಮೀಪದ ರಸ್ತೆಯಲ್ಲಿ ಜನವರಿ 20ರಂದು ಮಂಗಳವಾರ ರಾತ್ರಿ ಎರಡು ಚಿರತೆಗಳು ಕಾಣಿಸಿಕೊಂಡು ನಾಯಿಯೊಂದರ ಮೇಲೆ ದಾಳಿ ನಡೆಸಿ ಹೊತ್ತೊಯ್ದ ಘಟನೆ ನಡೆದಿದೆ.

ಸ್ಥಳೀಯರೊಬ್ಬರು ರಾತ್ರಿ ತನ್ನ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ, ರಸ್ತೆಯ ಬದಿಯಲ್ಲಿ ದಾರಿಹೋಕರಿಗೆ ಹೊಂಚು ಹಾಕುತ್ತಿದ್ದ ಚಿರತೆಗಳನ್ನು ಗಮನಿಸಿ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ಕೂಡಲೇ ಅರಣ್ಯಾಧಿಕಾರಿಗಳು ರಾತ್ರಿ ವೇಳೆಯಲ್ಲೇ ಚಿರತೆ ಓಡಾಟ ಕಂಡುಬಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಗಳನ್ನು ಸೆರೆ ಹಿಡಿಯುವ ಉದ್ದೇಶದಿಂದ ಬೋನುಗಳನ್ನು ಅಳವಡಿಸಿದ್ದಾರೆ.

ಈ ಹಿಂದೆ ತಾಲೂಕಿನ ವಿವಿಧ ಭಾಗಗಳಲ್ಲಿ ಚಿರತೆಗಳ ಓಡಾಟ ಕಂಡುಬಂದಿರುವ ಹಿನ್ನೆಲೆ, ನಾಗರಿಕರು ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಸಂಚರಿಸುವಾಗ ವಿಶೇಷ ಜಾಗ್ರತೆ ವಹಿಸಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬೆಳ್ತಂಗಡಿ ಅರಣ್ಯಾಧಿಕಾರಿ ಸಂದೀಪ್, ಉಪವಲಯ ಅರಣ್ಯಾಧಿಕಾರಿ ರವಿ ಕುಮಾರ್, ಅರಣ್ಯ ಸಂಚಾರಿ ದಳದ ಪುರುಷೋತ್ತಮ್ ಮೇಟಿ, ಸ್ಥಳೀಯರಾದ ಸತೀಶ್ ಮೂಡುಕೋಡಿ, ದಿನೇಶ್ ನವುಂಡ, ಪ್ರಕಾಶ್ ಮಾಲಾಡಿ, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಸುಧಾಕರ್ ಆಳ್ವ ಕುಳ್ಳಂಜ ಹಾಗೂ ಉಮೇಶ್ ಮಾಲಾಡಿ ಅವರು ಅರಣ್ಯಾಧಿಕಾರಿಗಳೊಂದಿಗೆ ಚಿರತೆ ಬೋನು ಅಳವಡಿಸುವ ಕಾರ್ಯದಲ್ಲಿ ಸಹಕರಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page