August 27, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಗೆ ನೂತನ ಅಧ್ಯಕ್ಷರಾಗಿ ಉದ್ಯಮಿ ಎಸ್.ಎ. ಇಸ್ಮಾಯಿಲ್ ಆಯ್ಕೆ

ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ವಾರ್ಷಿಕ ಮಹಾಸಭೆ ಶುಕ್ರವಾರ ಮದ್ರಸಾ ಹಾಲ್‌ನಲ್ಲಿ ನಡೆಯಿತು. ಸಭೆಗೆ ಮಸೀದಿ ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಅಮೀರುದ್ದೀನ್ ಹಾಗೂ ಜೊತೆಯ ಕಾರ್ಯದರ್ಶಿ ಕರೀಂ ನೆಲ್ಲಿ ವರದಿ ಮತ್ತು ಲೆಕ್ಕಪತ್ರಗಳನ್ನು ಮಂಡಿಸಿದರು. ಖತೀಬ್ ಹಸೈನಾರ್ ಸಅದಿ ಪೆರ್ಲ ದುಆ ನೆರವೇರಿಸಿದರು.

ಸಭೆಯ ಅನುಮೋದನೆ ಪಡೆದು ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಉದ್ಯಮಿ ಹಾಗೂ ಆರ್.ಆರ್. ಸ್ಕ್ರ್ಯಾಪ್ ಮಾಲಕ ಎಸ್.ಎ. ಇಸ್ಮಾಯಿಲ್ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಹಂಝ ಕಾಯರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಅಮೀರುದ್ದೀನ್, ಜೊತೆಯ ಕಾರ್ಯದರ್ಶಿಗಳಾಗಿ ಅಶ್ರಫ್ ಆದರ್ಶ ಮಾಣಿ ಮತ್ತು ಮೂಸಾ ಕರೀಂ ಮಾಣಿ, ಕೋಶಾಧಿಕಾರಿಯಾಗಿ ಹಾಜಿ ಅಬ್ದುಲ್ ಹಮೀದ್ ನೆಲ್ಲಿ ಅವರನ್ನು ನೇಮಕ ಮಾಡಲಾಯಿತು.

ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ, ಯೂಸುಫ್ ಹಾಜಿ ಸೂರಿಕುಮೇರು, ಅಝೀಂ ನೆಲ್ಲಿ, ಮುಹಮ್ಮದಾಲಿ ಮುಸ್ಲಿಯಾರ್, ಅಬ್ದುಲ್ ರಹ್ಮಾನ್ ಪುತ್ತು, ಬಶೀರ್ ಮಾಣಿ, ಅಬ್ದುಲ್ ಖಾದರ್ ಮಾಣಿ, ಇಬ್ರಾಹಿಂ ನೆಲ್ಲಿ, ಅಬ್ದುಲ್ ಲತೀಫ್ ಗುಡ್ಡೆ, ನಾಸೀರ್ ಬದ್ರಿಯಾ ಗ್ರೌಂಡ್ ಹಾಗೂ ಸುಲೈಮಾನ್ ಕುಕ್ಕಿಲ ಆಯ್ಕೆಯಾದರು.

ಚುನಾವಣಾ ವೀಕ್ಷಕರಾಗಿ ಹಾಜಿ ಮುಹಮ್ಮದ್ ಬಂಡಾಡಿ ಮತ್ತು ಎಸ್.ಎ. ಉಮ್ಮರ್ ಕಾರ್ಯನಿರ್ವಹಿಸಿದರು.

You may also like

News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ
News

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ DAPC ಬಿಷಪ್‌ಗಳು – ಕ್ರೈಸ್ತ ಸಮುದಾಯದ ಬೇಡಿಕೆಗಳ ಕುರಿತು ಮನವಿ

ಡಯಾಸಿಸ್ ಆಫ್ ಆಲ್ ಪ್ರೊಟೆಸ್ಟಂಟ್ ಚರ್ಚಸ್ (DAPC) ನಿಯೋಗವು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ, ರಾಜ್ಯದ ಪ್ರೊಟೆಸ್ಟಂಟ್, ಪೆಂಟೆಕೋಸ್ಟಲ್ ಹಾಗೂ ಸ್ವತಂತ್ರ ಕ್ರೈಸ್ತ

You cannot copy content of this page