October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕ್ರೀಡೆ ಒತ್ತಡ ನಿವಾರಣೆಗೆ ಪರಿಣಾಮಕಾರಿ ಮಾರ್ಗ – ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ

ಪೊಲೀಸರು ಹಾಗೂ ಪತ್ರಕರ್ತರು ದಿನನಿತ್ಯವೂ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಎದುರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಮಾನಸಿಕ ಹಾಗೂ ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿವಾರಿಸಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೆ.ಪಿ.ಟಿ. ಪ್ರಾಂಶುಪಾಲ ಹರೀಶ್ ಶೆಟ್ಟಿ ಭಾಗವಹಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಮಂಗಳೂರು ಪತ್ರಿಕಾ ಭವನ ಟ್ರಸ್ಟ್‌ನ ಸದಸ್ಯರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ. ಪೂಜಾರಿ, ಉಪಾಧ್ಯಕ್ಷ ವಿಲ್ಫ್ರೆಡ್ ಡಿಸೋಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹರೀಶ್ ಮೋಟುಕಾನ ವಂದಿಸಿದರು. ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮವನ್ನು ನಿರೂಪಿಸಿದರು.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page