October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸೂರಿಕುಮೇರು ಬಳಿ ಡಿವೈಡರ್ ಹತ್ತಿದ KSRTC ಬಸ್  

ಭಾರೀ ಅಪಾಯದಿಂದ ಪ್ರಯಾಣಿಕರು ಪಾರು

ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಒಂದು ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿ ನಿಂತ ಘಟನೆ ನಡೆದಿದೆ. ಆದಿತ್ಯವಾರ ರಾತ್ರಿ ಮತ್ತು ಸೋಮವಾರ ಬೆಳಗ್ಗಿನ ನಡುವೆ ಈ ಘಟನೆ ನಡೆದಿದ್ದು, ಬಸ್‌ಗೆ ಭಾಗಶಃ ಹಾನಿಯಾಗಿದೆ.

ಅತೀವೇಗದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಹತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.

ಘಟನೆಯಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ನಂತರ ಪೊಲೀಸರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಸುಧಾರಿಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page