October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪರವಾನಿಗೆ ಇಲ್ಲದೇ ಅಕ್ರಮ  ಕಟ್ಟಡ ನಿರ್ಮಾಣ ಆರೋಪ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು

ಬೆಳ್ತಂಗಡಿ ತಾಲೂಕಿನಲ್ಲಿ ಸರ್ಕಾರಕ್ಕೆ ವಂಚನೆ ಮಾಡಿ, ಸಂಬಂಧಪಟ್ಟ ಯಾವುದೇ ಇಲಾಖೆಯಿಂದ ಪರವಾನಿಗೆ ಪಡೆಯದೇ ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಶೇಖರ್ ಲಾಯಿಲ ಅವರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ. ಇಂದು ಜನವರಿ 26ರಂದು ಸೋಮವಾರ ಕುಕ್ಕೇಡಿ ಡಾ. ಬಿ.ಆರ್. ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಈ ಕುರಿತು ಅವರು ಮನವಿ ಸಲ್ಲಿಸಿದರು. ಮನವಿಯಲ್ಲಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಭ್ಯಾಸ್ ಕಾಲೇಜು, ಕರಿಮೆಣೇಲು ಗ್ರಾಮದ ಬೈಟ್ ಹಾರಿಜಾನ್ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಬೆಸ್ಟ್ ವಸತಿ ಶಾಲೆ, ಕುವೆಟ್ಟು ಗ್ರಾಮದ ವಿದ್ವತ್ ಕಾಲೇಜು ಮತ್ತು ಶೆಣೈ ರೆಸ್ಟೋರೆಂಟ್ ಕಟ್ಟಡಗಳು ಸ್ಥಳೀಯಾಡಳಿತ ಸೇರಿದಂತೆ ಯಾವುದೇ ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯದೇ ಅಕ್ರಮವಾಗಿ ನಿರ್ಮಾಣಗೊಂಡಿವೆ ಎಂದು ಆರೋಪಿಸಲಾಗಿದೆ.

ಈ ಕಟ್ಟಡಗಳ ನಿರ್ಮಾಣದಿಂದ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಿರುವ ಶೇಖರ್ ಲಾಯಿಲ, ಈ ಕುರಿತು ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ದೂರು ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ, ರಾತ್ರಿ ಸಮಯ ಹಾಗೂ ಸರ್ಕಾರಿ ರಜಾ ದಿನಗಳಲ್ಲಿ ಕಟ್ಟಡ ಕಾಮಗಾರಿಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂಬುದನ್ನೂ ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸ್ಥಳೀಯಾಡಳಿತದ ಅನುಮತಿ ಇಲ್ಲದೇ ಕಾನೂನುಬಾಹಿರವಾಗಿ ಕಟ್ಟಡ ನಿರ್ಮಾಣವಾಗುತ್ತಿದ್ದರೂ ಸಂಬಂಧಪಟ್ಟ ಇಲಾಖೆಗಳು ಮೌನವಹಿಸಿರುವುದು ಶಂಕೆಗಳಿಗೆ ಕಾರಣವಾಗಿದೆ ಎಂದು ಶೇಖರ್ ಲಾಯಿಲ ಆರೋಪಿಸಿ, ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಒತ್ತಾಯಿಸಿದ್ದಾರೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page