September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ ಶತಮಾನೋತ್ಸವ ಸಮಾರೋಪ

SSVP ಸೇವೆಗೆ ಸಮಾಜದ ಗೌರವ ಹಾಗೂ ದೇವರ ಆಶೀರ್ವಾದ ಸದಾ ಇರುತ್ತದೆ – ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ

ಡಯಾಲಿಸಿಸ್ ರೋಗಿಗಳಿಗೆ ಶೇಕಡಾ 50ರಷ್ಟು ವೆಚ್ಚ ಭರಿಸುವ ಮಹತ್ವದ ಯೋಜನೆ ಉದ್ಘಾಟನೆ

 

ಮಂಗಳೂರು ಧರ್ಮಕ್ಷೇತ್ರದಲ್ಲಿ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ (SSVP) ಸ್ಥಾಪನಾ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮವು ನಗರದ ಫಾದರ್ ಮುಲ್ಲರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಭವ್ಯವಾಗಿ ಜನವರಿ 25ರಂದು ಭಾನುವಾರ ಜರುಗಿತು.

 

ಸ್ಪೇಯ್ನ್‌ನಿಂದ ಆಗಮಿಸಿದ ಸಂತ ವಿನ್ಸೆಂಟ್ ದಿ ಪೌಲ್ ಸೊಸೈಟಿಯ ಅಂತರಾಷ್ಟ್ರೀಯ ಅಧ್ಯಕ್ಷರಾದ ಜುವಾನ್ ಮ್ಯಾನುಯೆಲ್ ಬಿ. ಗೊಮೆಜ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. “ದಾನಧರ್ಮ ಎಂದರೆ ಸಂಕಷ್ಟದಲ್ಲಿರುವವರನ್ನು ನಮ್ಮ ಸಮಾನರಂತೆ ಕಾಣುವುದು. ಇದರಿಂದ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯ ಎಂಬ ಸಂಸ್ಥೆಯ ಸ್ಥಾಪಕ ಫ್ರೆಡರಿಕ್ ಒಝನಾಮ್ ಅವರ ಆಶಯವನ್ನು ಸ್ಮರಿಸಿದರು. ಕಳೆದ ಒಂದು ಶತಮಾನದಿಂದ ಮಂಗಳೂರು ಧರ್ಮಕ್ಷೇತ್ರದ SSVP ಸದಸ್ಯರು ನಿಸ್ವಾರ್ಥ ಸೇವೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅರ್ಹ ಬಡ ಮೂತ್ರಪಿಂಡ ರೋಗಿಗಳಿಗೆ ಡಯಾಲಿಸಿಸ್ ಸೇರಿದಂತೆ ಚಿಕಿತ್ಸಾ ವೆಚ್ಚದ ಶೇಕಡಾ 50 ರಷ್ಟು ಭರಿಸುವ ಟ್ರಿನಿಟಿ ಮೆಡಿಕೇರ್ ಟ್ರಸ್ಟ್ ಹಾಗೂ SSVP ಕೇಂದ್ರಿಯ ಸಮಿತಿಯ ಜಂಟಿ ಯೋಜನೆಯನ್ನು ಅವರು ಉದ್ಘಾಟಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಮಾತನಾಡಿ, “ಬಡವರ ಸೇವೆಗೆ ದೇವರ ಆಶೀರ್ವಾದ ಸದಾ ಇರುತ್ತದೆ. ವಿನ್ಸೆಂಟ್ ಪೌಲ್ ಸೊಸೈಟಿಯ ಸೇವಾ ಕಾರ್ಯಕ್ರಮಗಳು ಜನರಲ್ಲಿ ಅಪಾರ ಗೌರವ ಪಡೆದಿವೆ ಎಂದು ಹೇಳಿದರು.

ಗೌರವ ಅತಿಥಿಗಳಾದ SSVPಯ ರಾಷ್ಟ್ರೀಯ ಅಧ್ಯಕ್ಷ ಜೂಡ್ ಮಂಗಳರಾಜ್ ಶತಮಾನೋತ್ಸವ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಸಂಸ್ಥೆಗೆ ಶುಭ ಹಾರೈಸಿದರು. ಕರ್ನಾಟಕ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ದೇಶದ ಕೇವಲ 2.5 ಶೇಕಡಾ ಕ್ರೈಸ್ತ ಸಮುದಾಯವು ಯಾವುದೇ ಮತಭೇದವಿಲ್ಲದೆ ಸಮಾಜದ ಎಲ್ಲಾ ವರ್ಗಗಳಿಗೆ ಅಪಾರ ಸೇವೆ ಸಲ್ಲಿಸುತ್ತಿದ್ದು, ಇದರಲ್ಲಿ SSVP ಸಂಸ್ಥೆಯ ಪಾತ್ರ ಮಹತ್ವದಾಗಿದೆ ಎಂದು ಪ್ರಶಂಸಿಸಿದರು.

ಅಂತರಾಷ್ಟ್ರೀಯ ಜನರಲ್ ಕೌನ್ಸಿಲ್ ಪದಾಧಿಕಾರಿ ಜೋಸೆಫ್ ಪಾಂಡ್ಯನ್, ರಾಷ್ಟ್ರೀಯ ಕಾರ್ಯದರ್ಶಿ ಸಾಂತಿಗೊ ಮಾಣಿಕ್ಯಮ್, ಫಾದರ್ ಮುಲ್ಲರ್ ಸಮೂಹ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾದರ್ ಫಾವುಸ್ಟಿನ್ ಲುಕಾಸ್ ಲೋಬೊ, ಟ್ರಿನಿಟಿ ಮೆಡಿಕೇರ್ ಟ್ರಸ್ಟ್‌ನ ಜೋಸೆಫ್ ಮಿನೇಜಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ವಿಪಿ ರಾಷ್ಟ್ರೀಯ ಪದಾಧಿಕಾರಿಗಳಾದ ಆಶಾ ವಾಜ್, ಆಲಿಸ್ಟರ್ ನಜ್ರೆತ್, ಮಂಗಳೂರು ಕೇಂದ್ರಿಯ ಸಮಿತಿಯ ಆಧ್ಯಾತ್ಮಿಕ ಸಲಹೆಗಾರರಾದ ವಂದನೀಯ ಫಾದರ್ ಫ್ಲೇವಿಯನ್ ಲೋಬೊ, ಕೋಶಾಧಿಕಾರಿ ಕ್ಲೇರೆನ್ಸ್ ಮಚಾದೊ, ಶತಮಾನೋತ್ಸವ ಸಂಚಾಲಕಿ ಫಿಲೋಮಿನ ಮಿನೇಜಸ್, ಮಾಜಿ ಅಧ್ಯಕ್ಷರಾದ ಗಿಲ್ಬರ್ಟ್ ಪಿಂಟೊ, ಹೆರಾಲ್ಡ್ ಮೊಂತೆರೋ ಸೇರಿದಂತೆ ಅನೇಕ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೇಂದ್ರಿಯ ಸಮಿತಿ ಅಧ್ಯಕ್ಷ ಗ್ಯಾಬ್ರಿಯಲ್ ಜ್ಯೋ ಕುವೆಲ್ಲೊ ಸ್ವಾಗತಿಸಿ ಪ್ರಸ್ತಾವನೆಗೈದರೆ, ಕಾರ್ಯದರ್ಶಿ ಲಿಗೋರಿ ಫೆರ್ನಾಂಡಿಸ್ ವಂದಿಸಿದರು. ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿದರು.

You may also like

News

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು – ಅಂತರ್‌ರಾಜ್ಯ ಕಳ್ಳನ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿ, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬೆಟ್ಟಂಪಾಡಿ
News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion

You cannot copy content of this page