June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕುಳಾಯಿ ದೈವಸ್ಥಾನ ಮನೆ ಕಳ್ಳತನ ಪ್ರಕರಣ ಭೇದಿಸಿದ ಸುರತ್ಕಲ್ ಪೊಲೀಸರು

ರೂಪಾಯಿ 1.95 ಲಕ್ಷ ಮೌಲ್ಯದ ಪೂಜಾ ಸಾಮಗ್ರಿ ವಶ, ಇಬ್ಬರ ಬಂಧನ

ಕುಳಾಯಿ ಗ್ರಾಮದ ಖಾಲಿ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಪೂಜಾ ಪರಿಕರಗಳನ್ನು ಕಳವು ಮಾಡಿದ್ದ ಪ್ರಕರಣವನ್ನು ಸುರತ್ಕಲ್ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿತರನ್ನು ಬಂಧಿಸಿ ಸುಮಾರು ರೂಪಾಯಿ 1.95 ಲಕ್ಷ ಮೌಲ್ಯದ ಕಳ್ಳತನದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಕುಳಾಯಿ ಗ್ರಾಮದ ಯಶೋದ ಕ್ಲಿನಿಕ್ ಸಮೀಪದ ಮನೆ ನಂ.6-177ರಲ್ಲಿ ವಾಸವಿರುವ 43 ವರ್ಷ ಪ್ರಾಯದ ಅಮಿತಾ, ಗಂಡ: ಸುರೇಶ್ ಅವರ ತಾಯಿ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳನ್ನು ದಿನಾಂಕ 26-12-2025ರ ರಾತ್ರಿ ಅಪರಿಚಿತರು ಮೇಲ್ಚಾವಣಿಯ ಹಂಚು ತೆಗೆದು ಒಳನುಗ್ಗಿ ಕಳವು ಮಾಡಿದ್ದರು. ಈ ಕುರಿತು ದಿನಾಂಕ 27-12-2025ರಂದು ಸುರತ್ಕಲ್ ಠಾಣೆಯಲ್ಲಿ ಅ.ಕ್ರ.170/2025 ಕಲಂ 331(4), 305(ಎ) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರು ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ತನಿಖೆ ನಡೆಸಿ 27 ವರ್ಷ ಪ್ರಾಯದ ವಾಜೀದ್ ಜೆ @ ವಾಜಿ ಎಂಬಾತನನ್ನು ಬಂಧಿಸಿದರು. ವಿಚಾರಣೆಯಲ್ಲಿ ಕಳವು ಮಾಡಿದ ಹಿತ್ತಾಳೆ ಹಾಗೂ ತಾಮ್ರದ ಸಾಮಗ್ರಿಗಳನ್ನು ಜೋಕಟ್ಟೆಯ ಸಯ್ಯದ್ ಆಲಿ ಎಂಬಾತನಿಗೆ ಮಾರಾಟ ಮಾಡಿರುವುದಾಗಿ ತಿಳಿದುಬಂದ ಹಿನ್ನೆಲೆಯಲ್ಲಿ ದಿನಾಂಕ 27-01-2026ರಂದು ಸಯ್ಯದ್ ಆಲಿಯನ್ನೂ ಬಂಧಿಸಲಾಗಿದೆ.

ಆರೋಪಿತರಿಂದ ಬೆಳ್ಳಿಯ ಮಂತ್ರದೇವತೆಯ ಮೂರ್ತಿ, ಕಡ್ಸಲೆ, ಕೊಡೆ ಸೇರಿದಂತೆ ರೂಪಾಯಿ 1,95,000 ಮೌಲ್ಯದ ಬೆಳ್ಳಿ ಸಾಮಗ್ರಿ, ಹಿತ್ತಾಳೆ ಹಾಗೂ ತಾಮ್ರದ ಪೂಜಾ ಪರಿಕರಗಳು, ಟಿವಿ–ಸೆಟ್‌ಟಾಪ್ ಬಾಕ್ಸ್, ಎರಡು ಮೊಬೈಲ್ ಫೋನ್‌ಗಳು ಹಾಗೂ ಕಾವೂರು ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾದ ಸ್ಕೂಟರ್ ವಶಪಡಿಸಿಕೊಳ್ಳಲಾಗಿದೆ.

ಪ್ರಮುಖ ಆರೋಪಿಯಾದ ವಾಜೀದ್ ಜೆ @ ವಾಜಿ ಮೇಲೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೊಲೆ ಯತ್ನ, ದರೋಡೆ, ಮನೆ ಕಳ್ಳತನ, ವಾಹನ ಕಳ್ಳತನ ಸೇರಿ ಅನೇಕ ಪ್ರಕರಣಗಳು ದಾಖಲಾಗಿದ್ದು, ಸುರತ್ಕಲ್ ಠಾಣೆಯಲ್ಲಿ ‘ಬಿ’ ರೌಡಿ ಶೀಟ್ ಮತ್ತು ಎಂಒಬಿ ತೆರೆಯಲಾಗಿದೆ. ನ್ಯಾಯಾಲಯದ ದಸ್ತಗಿರಿ ವಾರಂಟ್ ಜಾರಿಯಲ್ಲಿದ್ದ ಈತನನ್ನು ದಿನಾಂಕ 28-01-2026ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

You may also like

News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು

You cannot copy content of this page