October 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೆಡಿಕಲ್ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ – ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಜೀವಾಂತ್ಯ

ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧಾರವಾಡದಲ್ಲಿ ಸಂಭವಿಸಿದೆ.

ಧಾರವಾಡದ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯ ಸೈಕಿಯಾಟ್ರಿಕ್ ಪಿಜಿ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಶಿವಮೊಗ್ಗ ಮೂಲದ ಡಾ. ಪ್ರಜ್ಞಾ ಪಾಲೇಗರ್ ಮೃತರಾಗಿದ್ದಾರೆ. ಡಾ. ಪ್ರಜ್ಞಾ ಅವರು ಕೇವಲ ಎರಡು ವಾರಗಳ ಹಿಂದಷ್ಟೇ ಪಿಜಿ ತರಬೇತಿಗಾಗಿ ಧಾರವಾಡಕ್ಕೆ ಆಗಮಿಸಿದ್ದರು.

ನಿನ್ನೆ ಆಕೆಯ ಪೋಷಕರು ಸಂಸ್ಥೆಗೆ ಬಂದು ಪುತ್ರಿಯೊಂದಿಗೆ ಮಾತನಾಡಿಕೊಂಡು ಹಿಂತಿರುಗಿದ್ದರೆಂದು ತಿಳಿದುಬಂದಿದೆ. ಪೋಷಕರು ಹೊರಟ ಕೆಲವೇ ಗಂಟೆಗಳಲ್ಲಿ ಡಾ. ಪ್ರಜ್ಞಾ ಅವರು ದುಡುಕಿನ ನಿರ್ಧಾರ ಕೈಗೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟನೆ ಕುರಿತು ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

You may also like

News

ಮಹಿಳೆ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣ – ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಜಾಗದ ವಿಚಾರಕ್ಕೆ ಸಂಬಂಧಿಸಿದ ವಿವಾದದಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ
News

ಕೋಮುದ್ವೇಷದ ಭಾಷಣ ಆರೋಪ – ಜಗದೀಶ್ ಕಾರಂತ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಪುತ್ತೂರಿನ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕೋಮುದ್ವೇಷದ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಸಂಘಟನೆಗಳ ಮುಖಂಡರಾದ ಜಗದೀಶ್ ಕಾರಂತ್

You cannot copy content of this page