June 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅರಣ್ಯ ಇಲಾಖೆಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಚಿಣ್ಣರ ವನದರ್ಶನ’ ಪ್ರವಾಸ

ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಜನವರಿ 27 ಮತ್ತು 28ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್, ಪುಂಜಾಲಕಟ್ಟೆ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ‘ಚಿಣ್ಣರ ವನದರ್ಶನ’ ಪ್ರವಾಸವನ್ನು ಆಯೋಜಿಸಲಾಗಿತ್ತು. ಪ್ರವಾಸದ ಭಾಗವಾಗಿ ವಿದ್ಯಾರ್ಥಿಗಳನ್ನು ಮೂಡುಬಿದಿರೆಯ ಕಡಲಕೆರೆ, ಸಾಮಾಜಿಕ ಅರಣ್ಯ ವಿಭಾಗದ ಸಸ್ಯಕ್ಷೇತ್ರ, ಹೆಬ್ರಿ ವಲಯದ ಕೇಂದ್ರ ಮರಮುಟ್ಟು ಸಂಗ್ರಹಾಲಯ, ಸಾಲುಮರದ ತಿಮ್ಮಕ್ಕ ಉದ್ಯಾವನ (ಹೆಬ್ರಿ) ಹಾಗೂ ಕೂಡ್ಲು ಜಲಪಾತಗಳಿಗೆ ಕರೆದುಕೊಂಡು ಹೋಗಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಕಾರ್ಯವಿಧಾನಗಳು, ಅರಣ್ಯ ಸಂರಕ್ಷಣೆ ಹಾಗೂ ಅರಣ್ಯ ಪ್ರದೇಶಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.

ಪ್ರವಾಸದ ದಿನ ಹೆಬ್ರಿ ಸಮೀಪದ ಸೀತಾನದಿ ನಿಸರ್ಗಧಾಮದಲ್ಲಿ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ್ದರು. ಪ್ರವಾಸದಲ್ಲಿ ಶಿಕ್ಷಕರಾದ ಹರಿಪ್ರಸಾದ್, ಸದಾನಂದ ಬಿರಾದಾರ್ ಹಾಗೂ ಶಿಕ್ಷಕಿಯರಾದ ವಿದ್ಯಾ ಹೆಗ್ಡೆ, ಸುಧಾ ಅವರು ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿ ಸಹಕಾರ ನೀಡಿದರು.

ಅರಣ್ಯ ಇಲಾಖೆಯ ಪರವಾಗಿ ಉಪವಲಯ ಅರಣ್ಯಾಧಿಕಾರಿಗಳಾದ ಸಂತೋಷ, ರಾಘವೇಂದ್ರ ಕೆ. ಹಾಗೂ ಗಸ್ತು ಅರಣ್ಯ ಪರಿಪಾಲಕರಾದ ರವಿಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

You may also like

News

EVIDENCIA 2026 -Strengthens Evidence-Based Homoeopathic Research

Father Muller Homoeopathic Medical College and Hospital, in association with the Indian Homoeopathic Medical Association (IHMA), Mangaluru Chapter, and the
News

ಕೋಳಿ ಅಂಕದ ಜೂಜಾಟದ ಅಡ್ಡೆಗೆ ವಿಟ್ಲ ಪೊಲೀಸರ ದಿಢೀರ್ ದಾಳಿ – ಮೂವರ ಬಂಧನ, ಸೊತ್ತುಗಳ ವಶ

ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ ಹಣ ಪಣವಾಗಿಟ್ಟು ಕೋಳಿ ಅಂಕ ಜೂಜಾಟ ಆಡುತ್ತಿದ್ದ ಜಾಗಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ

You cannot copy content of this page