June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಧಕ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಅವರು “ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆ

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ. ಅವರು ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.), ಬಾಳ್ತಿಲ ವತಿಯಿಂದ ಸಾಧಕ ಮಹಿಳೆಯರಿಗೆ ನೀಡಲಾಗುವ ಪ್ರತಿಷ್ಠಿತ “ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಾಲಾ ಶಿಕ್ಷಣ ಹಾಗೂ ಶಾಲೆಯ ಭೌತಿಕ ಅಭಿವೃದ್ಧಿಯಲ್ಲಿ ಅವರು ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಈ ಗೌರವ ಲಭಿಸಿದೆ. ಸಂಗೀತ ಶರ್ಮ ಪಿ.ಜಿ. ಅವರು ಈಗಾಗಲೇ “ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ”, ರಾಜ್ಯಮಟ್ಟದ “ಶಿಕ್ಷಕ ರತ್ನ” ಪ್ರಶಸ್ತಿಗಳನ್ನು ಪಡೆದಿದ್ದು, ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಜೆಸಿಐ ಸೇರಿದಂತೆ ಅನೇಕ ಸಂಘ–ಸಂಸ್ಥೆಗಳ ಮೂಲಕವೂ ಗೌರವಿಸಲ್ಪಟ್ಟಿದ್ದಾರೆ.

ಅವರ ಶಿಕ್ಷಣ ಕ್ಷೇತ್ರದ ನಿರಂತರ ಸೇವೆ ಮತ್ತು ಸಮರ್ಪಣೆಯನ್ನು ಗುರುತಿಸಿ, ಈ ವರ್ಷದ ಸಾಧಕ ಮಹಿಳೆಯರಿಗೆ ನೀಡುವ “ಗಿರಿಜಾ ರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಫೆಬ್ರವರಿ 3ರಂದು ಬಿ.ಸಿ. ರೋಡ್‌ನ ಸ್ಪರ್ಶಕಲಾ ಮಂದಿರದಲ್ಲಿ ನಡೆಯಲಿರುವ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಉಪಸ್ಥಿತಿಯಲ್ಲಿ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ ಎಂದು ವಾಸ್ತಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕಿ, ನ್ಯಾಯವಾದಿ ಶೈಲಜಾ ರಾಜೇಶ್ ಅವರು ತಿಳಿಸಿದ್ದಾರೆ.

You may also like

News

ಕಂಬಳ ಕೋಣಗಳ ಮಾಲೀಕನಿಗೆ ಹಲ್ಲೆ, ಸುಲಿಗೆ ಯತ್ನ ಪ್ರಕರಣ – ಮೂವರು KCOCA ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು

ಪುತ್ತೂರಿನ ಕಜೆ ಲಾ ಚೇಂಬರ್ಸ್ ಇದರ ಪ್ರಖ್ಯಾತ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕಂಬಳದಲ್ಲಿ ಗೆದ್ದ ಕೋಣಗಳ ಮಾಲೀಕನಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ
News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ

You cannot copy content of this page