August 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಿರಾಂತನ ಚಾರಿಟೇಬಲ್ ಟ್ರಸ್ಟ್ ಉಕ್ಕುಡದ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ₹10 ಲಕ್ಷ ಅನುದಾನ – ಮಂಜೂರಾತಿ ಪತ್ರ ಹಸ್ತಾಂತರ

ಚಿರಾಂತನ ಚಾರಿಟೇಬಲ್ ಟ್ರಸ್ಟ್, ಉಕ್ಕುಡ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ವೃದ್ಧಾಶ್ರಮ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂಪಾಯಿ 10 ಲಕ್ಷ ಮೊತ್ತದ ಅನುದಾನ ಮಂಜೂರಾಗಿದ್ದು, ಅದರ ಮಂಜೂರಾತಿ ಪತ್ರವನ್ನು ಜನವರಿ 29ರಂದು ಗುರುವಾರ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಜೂರಾತಿ ಪತ್ರವನ್ನು ವಿಟ್ಲ ಜೈನ ಬಸದಿ ಅಧ್ಯಕ್ಷರಾದ ಜೇತೇಶ್ ಜೈನ್ ಅವರು ಟ್ರಸ್ಟ್‌ಗೆ ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ಚಿರಾಂತನ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ತೇಜಸ್ವಿ ಶಂಕರ್ ಜೂನಿಯರ್, ವಿಟ್ಲ ವಲಯದ ಜನಜಾಗೃತಿ ಅಧ್ಯಕ್ಷರಾದ ಕೃಷ್ಣಯ್ಯ ಬಳ್ಳಾಳ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ್, ಜೈನ ಬಸದಿ ಸದಸ್ಯರಾದ ದರ್ಶನ ಜೈನ್, ಜನಜಾಗೃತಿ ಮಾಜಿ ಅಧ್ಯಕ್ಷರಾದ ಕಿರಣ್ ಹೆಗ್ಡೆ, ಬಾಲಕೃಷ್ಣ ಆಳ್ವ, ಕೆಯ್ಯುರ್ ನಾರಾಯಣ ಭಟ್, ಜನಜಾಗೃತಿ ಸದಸ್ಯರಾದ ನಟೇಶ್ ವಿಟ್ಲ, ಕೇಪು ವಲಯದ ಜನಜಾಗೃತಿ ಅಧ್ಯಕ್ಷರಾದ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಪೆರ್ನೆ ವಲಯದ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ರೋಹಿತಾಕ್ಷ ಬಾಣಬೆಟ್ಟು, ಒಕ್ಕೂಟಗಳ ವಲಯಧ್ಯಕ್ಷರಾದ ಪ್ರಮೀಳಾ ಹಾಗೂ ರಾಜೇಂದ್ರ ರೈ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್, ವಿಟ್ಲ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ ಗೌಡ, ಒಕ್ಕೂಟದ ಅಧ್ಯಕ್ಷರಾದ ಸೀತಾಲಕ್ಷ್ಮಿ ಮತ್ತು ವಿಶ್ವನಾಥ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಶೌರ್ಯ ವಿಪತ್ತು ನಿರ್ವಹಣ ಘಟಕದ ಸದಸ್ಯರು ಹಾಗೂ ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ವಲಯದ ಮೇಲ್ವಿಚಾರಕರಾದ ಜಗದೀಶ್ ಪೂಜಾರಿ ಅವರು ನಿರೂಪಿಸಿದರು. ಚಿರಾಂತನ ಸೇವಾ ಟ್ರಸ್ಟ್‌ನ ಭಾರವಿ ಅವರು ವಂದಿಸಿದರು.

You may also like

News

CODP Extends Education Aid to Students, Spreads Awareness on Government Welfare Schemes

The Canara Organisation for Development and Peace (CODP) organised an Education Aid Cheque Distribution Programme along with an awareness session
News

ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜ ಹತ್ಯೆ – ಕೆಲವೇ ಗಂಟೆಗಳಲ್ಲಿ ಉಡುಪಿ ಪೊಲೀಸರಿಂದ ಆರೋಪಿ ರಾಜು ಬಂಧನ

ಮುದರಂಗಡಿ ಪೇಟೆಯಲ್ಲಿ ಹಾಡಹಗಲೇ ಉದ್ಯಮಿ ಡೇವಿಡ್ ಡಿಸೋಜ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ ಪೈಕಿ ಒಬ್ಬನನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನದ

You cannot copy content of this page