October 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರು ಬಳಿ ಕಾರು ತಡೆಗೋಡೆಗೆ ಡಿಕ್ಕಿ – ಬೆಂಕಿಗೆ ಆಹುತಿಯಾದ ವಾಹನ

ಪ್ರಾಣಾಪಾಯದಿಂದ ತಪ್ಪಿದ ಪ್ರಯಾಣಿಕರು

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಕಾರೊಂದು ರಸ್ತೆ ಬದಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಹೋಗಿರುವ ಘಟನೆ ಜನವರಿ 30ರಂದು ಶುಕ್ರವಾರ ಮಧ್ಯಾಹ್ನ ನಡೆದಿದೆ.

ದಿನಾಂಕ 30.01.2026 ರಂದು ಮಧ್ಯಾಹ್ನ 1.30 ಗಂಟೆ ಸುಮಾರಿಗೆ KA-05-NN-8222 ಸಂಖ್ಯೆಯ ಕಾರನ್ನು ಬೆಂಗಳೂರಿನ ರಾಜಾಜಿನಗರದ 29 ವರ್ಷ ಪ್ರಾಯದ ಹರ್ಷಿತ್ ಜಿ. ಅವರು ಚಾಲನೆ ಮಾಡುತ್ತಿದ್ದರು. ಅಜಾಗರೂಕ ಹಾಗೂ ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡಿದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತಕ್ಷಣವೇ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಘಟನೆಯ ಸಮಯದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಸ್ಥಳೀಯರು ಹಾಗೂ ಸಂಚಾರ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದರು. ಈ ಕುರಿತು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಸ್ವಯಂ ದೂರು ದಾಖಲಿಸಿಕೊಂಡು ಅಕ್ರಮ ಸಂಖ್ಯೆ 19/2026 ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ ಕಲಂ 281 ಬಿ.ಎನ್‌.ಎಸ್. ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

You may also like

News

ಪುತ್ತೂರು ರಸ್ತೆ ಅಪಘಾತದಲ್ಲಿ ಅಂಚೆ ಇಲಾಖೆ ಸಿಬ್ಬಂದಿ ಮಮತಾ ದುರ್ಮರಣ

ಪುತ್ತೂರು ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ
News

Inauguration of RGUHS Mangaluru Zone Throwball (M&W) Tournament 2026-27 at Father Muller Homoeopathic Medical College Deralakatte

RGUHS Mangaluru Zone Throwball (M&W) Tournament 2026-27 was hosted by Father Muller Homoeopathic Medical College, Deralakatte on 17th October 2026.

You cannot copy content of this page