June 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಂದೆಯಿಂದಲೇ 18 ವರ್ಷದ ಮಗಳ ಹತ್ಯೆ  

ಮಂಜೇಶ್ವರದಲ್ಲಿ ದಾರುಣ ಘಟನೆಆರೋಪಿ ಬಂಧನ

ತಂದೆಯೊಬ್ಬನು ತನ್ನ 18 ವರ್ಷದ ಮಗಳನ್ನೇ ಕಡಿದು ಬರ್ಬರವಾಗಿ ಹತ್ಯೆಗೈದ ದಾರುಣ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ ನಡೆದಿದೆ. ಕೌಟುಂಬಿಕ ಕಲಹವೇ ಈ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ತೂಮಿನಾಡಿನ 18 ವರ್ಷ ಪ್ರಾಯದ ಜುಮೈಲಾ ಕೊಲೆಗೀಡಾದ ಯುವತಿ. ಈ ಕೃತ್ಯ ನಡೆಸಿದ ಆರೋಪದಲ್ಲಿ ಆಕೆಯ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವೇಳೆ ಕಿರುಚಾಟದ ಶಬ್ದ ಕೇಳಿ ಪರಿಸರದವರು ಮನೆಗೆ ಧಾವಿಸಿದಾಗ, ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕೃತ್ಯ ನಡೆದ ಸಮಯದಲ್ಲಿ ಮನೆಯಲ್ಲೇ ತಾಯಿ ಇದ್ದರು ಎನ್ನಲಾಗಿದೆ.

ಸ್ಥಳೀಯರ ಪ್ರಕಾರ, ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ವಾಪಸಾಗಿದ್ದು, ಆಸ್ತಿ ವಿಚಾರವಾಗಿ ಕುಟುಂಬದಲ್ಲಿ ಆಗಾಗ್ಗೆ ಕಲಹ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ.

You may also like

News

ಮಂಗಳೂರಿನ ದೇರಳಕಟ್ಟೆಯ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವೀಣಾ ಡೇಸಾ ಇನ್ನಿಲ್ಲ

ಮಂಗಳೂರಿನ ದೇರಳಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಣಿಪುರದ 49 ವರ್ಷ ಪ್ರಾಯದ ವೀಣಾ ಡೇಸಾ ಅವರು ಜೂನ್ 7ರಂದು ಭಾನುವಾರ
News

ಮಂಗಳೂರು ಧರ್ಮಕ್ಷೇತ್ರದಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ 2026-27ಕ್ಕೆ ಅದ್ಧೂರಿ ಚಾಲನೆ!

ಜ್ಞಾನದ ದೀವಿಗೆ ಹಚ್ಚಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ ಯಾವುದೇ ಒಂದು ಸಮಾಜದ ಸತ್ಪ್ರಜೆಗಳ ನಿರ್ಮಾಣಕ್ಕೆ ಮತ್ತು ಯುವ ಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು ಬಿತ್ತಲು ಧಾರ್ಮಿಕ ಶಿಕ್ಷಣವು

You cannot copy content of this page