September 4, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಜ್ಜ–ಅಜ್ಜಿ ಮತ್ತು ಪೋಷಕರಿಗೆ ಗೌರವ ಸಲ್ಲಿಸಿದ ಬಜ್ಪೆಯ ಬೆಥನಿ ಶಾಲೆ

“ಅಜ್ಜ–ಅಜ್ಜಿ ನಮ್ಮ ಕುಟುಂಬದ ಬೇರುಗಳು; ಪೋಷಕರು ನಮ್ಮ ಜೀವನದ ದಾರಿದೀಪಗಳು” ಎಂಬ ಸಾರ್ಥಕ ಸಂದೇಶದೊಂದಿಗೆ ಬಜ್ಪೆಯ ಬೆಥನಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಜ್ಜ–ಅಜ್ಜಿ ದಿನ ಹಾಗೂ ಪೋಷಕರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಜ್ಜ–ಅಜ್ಜಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಕಳೆ ತುಂಬಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕ್ಲೆಟ್ಟಾ ಟ್ರೆಸ್ಸಿ ಡಿಕುನ್ಹಾ ಅವರು ಭಾಗವಹಿಸಿ, ಮಕ್ಕಳ ಜೀವನದಲ್ಲಿ ಅಜ್ಜ–ಅಜ್ಜಿ ಮತ್ತು ಪೋಷಕರು ವಹಿಸುವ ಮಹತ್ವದ ಪಾತ್ರವನ್ನು ವಿವರಿಸಿದರು. ಕುಟುಂಬ ಮೌಲ್ಯಗಳ ಅಗತ್ಯತೆ ಹಾಗೂ ಸಂಸ್ಕಾರದ ಮಹತ್ವವನ್ನು ಅವರು ವಿಶೇಷವಾಗಿ ಒತ್ತಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ ಭಗಿನಿ ವೀಣಾ ಡಿಸೋಜ ಅವರು ಮಾತನಾಡಿ, ಅಜ್ಜ–ಅಜ್ಜಿ ಹಾಗೂ ಪೋಷಕರ ಆಶೀರ್ವಾದ ಮತ್ತು ಮಾರ್ಗದರ್ಶನವೇ ಮಕ್ಕಳ ಯಶಸ್ಸಿನ ಮೂಲವಾಗಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಸಹಕಾರ ಅತ್ಯಂತ ಅಗತ್ಯವೆಂದು ತಿಳಿಸಿದರು.

ಕಾರ್ಯಕ್ರಮವನ್ನು ಶಾಲಾ ಸಹ ಶಿಕ್ಷಕರಾದ ವಿಲ್ಮಾ ಹಾಗೂ ಅನ್ಸಿಲ್ ಅವರು ಸಮರ್ಥವಾಗಿ ನಿರೂಪಿಸಿದರು. ಆಗಮಿಸಿದ ಎಲ್ಲ ಅತಿಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು ಆತ್ಮೀಯವಾಗಿ ಸ್ವಾಗತಿಸಿದರು. ವಾಣಿ ಅವರು ಧನ್ಯವಾದ ಸಮರ್ಪಣೆಯೊಂದಿಗೆ ಕಾರ್ಯಕ್ರಮಕ್ಕೆ ಪೂರ್ಣ ವಿರಾಮ ನೀಡಿದರು.

You may also like

News

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣ ಭೇದಿಸಿದ ಪುತ್ತೂರು ಪೊಲೀಸರು – ಅಂತರ್‌ರಾಜ್ಯ ಕಳ್ಳನ ಬಂಧನ

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಭೇದಿಸಿ, ಕೇರಳ ಮೂಲದ ಅಂತರ್‌ರಾಜ್ಯ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬೆಟ್ಟಂಪಾಡಿ
News

₹29 Lakh Donation to Father Muller for Paediatric Cancer Care Through ‘Symphony of Hope’

Music, compassion and community come together to support children battling cancer In a remarkable initiative that brought together music, compassion

You cannot copy content of this page