September 5, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಜೆಸಿಐ ಕಾಪು ಘಟಕದ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ವಿಕ್ಕಿ ಪೂಜಾರಿ ಮಡುಂಬು ಆಯ್ಕೆ

28 ವರ್ಷಗಳ ಇತಿಹಾಸ ಹೊಂದಿರುವ ವಲಯ–15ರ ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಜೆಸಿ ವಿಕ್ಕಿ ಪೂಜಾರಿ ಮಡುಂಬು ಅವರು ಆಯ್ಕೆಯಾಗಿದ್ದಾರೆ. ಪದಗ್ರಹಣ ಸಮಾರಂಭವು ಜನವರಿ 31ರಂದು ಶನಿವಾರ ಕಾಪು ಜೆಸಿಐ ಭವನದಲ್ಲಿ ಜರಗಿತು. ಸಮಾರಂಭದ ಮುಖ್ಯ ಅತಿಥಿಗಳಾಗಿ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ವಲಯಾಧ್ಯಕ್ಷ ಜೆಸಿ ಸಂತೋಷ್ ಶೆಟ್ಟಿ ವಿಟ್ಲ, ವಲಯ ಪೂರ್ವಾಧ್ಯಕ್ಷ ಜೆಸಿ ರಾಕೇಶ್ ಕುಂಜೂರು, ವಲಯ ಉಪಾಧ್ಯಕ್ಷ ಜೆಸಿ ಅರುಣ್ ಮಾಂಜ ಹಾಗೂ ನಿಕಟಪೂರ್ವ ಅಧ್ಯಕ್ಷೆ ಜೆಸಿ ಅನಿತಾ ಹೆಗ್ಡೆ ಉಪಸ್ಥಿತರಿದ್ದರು.

ಈ ಸಂದರ್ಭ 2025ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಹಾಗೂ ಗೃಹ ರಕ್ಷಕ ದಳದಲ್ಲಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮೀ ನಾರಾಯಣ ರಾವ್ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

2026ನೇ ಸಾಲಿಗೆ ಜೆಸಿಐ ಕಾಪು ಘಟಕದ ಪದಾಧಿಕಾರಿಗಳಾಗಿ ಕಾರ್ಯದರ್ಶಿಯಾಗಿ ಜೆಸಿ ಶ್ರುತಿ ಶೆಟ್ಟಿ, ಲೇಡಿ ಜೆಸಿ ಕೋ-ಆರ್ಡಿನೇಟರ್ ಆಗಿ ಜೆಸಿ ಕವಿತಾ ಕುಂದರ್, ಜೂನಿಯರ್ ಜೆಸಿ ಅಧ್ಯಕ್ಷರಾಗಿ ಜೆಜೆಸಿ ಮನ್ವಿತ್ ಬಂಗೇರ ಹಾಗೂ ಕೋಶಾಧಿಕಾರಿಯಾಗಿ ಜೆಸಿ ಶ್ರಾವ್ಯ ಜೆ. ಬಂಗೇರ ಅವರು ಕಾರ್ಯನಿರ್ವಹಿಸಲಿದ್ದಾರೆ.

You may also like

News

ಶ್ರೀ ಕೃಷ್ಣನ ಆದರ್ಶ ಪಾಲಿಸಿದಾಗ ಧಾರ್ಮಿಕ ಆಚರಣೆಗೆ ಸಾರ್ಥಕತೆ – ಮಾಜಿ ಸಚಿವ ಬಿ. ರಮಾನಾಥ ರೈ

ಸೌಹಾರ್ದತೆಗೆ ಮಾದರಿಯಾದ ಮಾಣಿ ಯುವಕ ಮಂಡಲದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಭಾವೈಕ್ಯತೆ ಸಾರಿದ ವಿಶಿಷ್ಟ ಕಾರ್ಯಕ್ರಮ ಮಾಣಿ: ಶ್ರೀಕೃಷ್ಣನ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಿದಾಗ ಮಾತ್ರ ನಾವು
News

ಹನೂರು ಅರಣ್ಯ ಗುಂಡಿನ ದಾಳಿ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ಕ್ರೈಸ್ತ ಸಂಘಟನೆ ಒತ್ತಾಯ

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಡಿಜಿಪಿಗೆ ಸ್ಟ್ಯಾನಿ ಪಿಂಟೋ ಬೆಂಗಳೂರು ಮನವಿ ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ

You cannot copy content of this page