October 17, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬೆಳ್ತಂಗಡಿಯಲ್ಲಿ ಶಾಲಾ ವಿದ್ಯಾರ್ಥಿನಿ ಅಪಹರಣ

ಚೂರಿ ಇರಿತ ಪ್ರಕರಣ ನಕಲಿ

ಬಾಲಕಿಯೇ ಸುಳ್ಳು ಹೇಳಿಕೆ ನೀಡಿರುವುದಾಗಿ ಒಪ್ಪಿಗೆ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶಾಲಾ ವಿದ್ಯಾರ್ಥಿನಿಯ ಅಪಹರಣ ಹಾಗೂ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ತನಿಖೆಯಲ್ಲಿ ಪ್ರಕರಣ ನಕಲಿ ಎಂದು ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಸಂಗ್ರಹಿಸಲಾದ CCTV ದೃಶ್ಯಗಳನ್ನು ಪರಿಶೀಲಿಸಿದಾಗ, ದೂರಿನಲ್ಲಿ ಉಲ್ಲೇಖಿಸಲಾದಂತೆ ಯಾವುದೇ ಸಂಶಯಾಸ್ಪದ ವಾಹನಗಳು ಕಂಡುಬಂದಿಲ್ಲ. ಇದರಿಂದ ಪ್ರಕರಣದ ಬಗ್ಗೆ ಅನುಮಾನ ಬಲಪಟ್ಟಿತ್ತು.

ಇನ್ನು ವಿದ್ಯಾರ್ಥಿನಿಗೆ ನಡೆಸಿದ ವೈದ್ಯಕೀಯ ಪರೀಕ್ಷೆಯಲ್ಲಿ, ಗಾಯವು ಪ್ರಾಥಮಿಕವಾಗಿ ಸ್ವಯಂ ಉಂಟುಮಾಡಿಕೊಂಡ ಗಾಯ (Self Inflicted Wound) ಎಂದು ದೃಢಪಟ್ಟಿದೆ. ನಂತರ ಪೊಲೀಸರು ಬಾಲಕಿಯ ಹೇಳಿಕೆಯನ್ನು ಪುನಃ ದಾಖಲಿಸಿದ್ದು, ಈ ವೇಳೆ ಘಟನೆಯ ಬಗ್ಗೆ ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿಯೇ ಒಪ್ಪಿಕೊಂಡಿದ್ದಾಳೆ.

ಬಾಲಕಿ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ, ಆಕೆಯ ಹಿತದೃಷ್ಟಿಯಿಂದ ಪ್ರಕರಣವನ್ನು ಸೂಕ್ಷ್ಮವಾಗಿ ಪರಿಗಣಿಸಲಾಗುತ್ತಿದೆ. ಈ ಸಂಬಂಧ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಅವರ ಮೂಲಕ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು. ಕೌನ್ಸೆಲಿಂಗ್ ವರದಿ ಆಧರಿಸಿ ಮುಂದಿನ ಕಾನೂನು ಕ್ರಮದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಇದಲ್ಲದೆ, ಅಪ್ರಾಪ್ತ ಬಾಲಕಿಗೆ ವಾಹನ ಚಾಲನೆಗೆ ಅವಕಾಶ ನೀಡಿದ ವ್ಯಕ್ತಿಯ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದು, ಪರಿಶೀಲಿಸದ ಮಾಹಿತಿ ಅಥವಾ ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಜವಾಬ್ದಾರಿಯಿಂದ ವರ್ತಿಸಬೇಕು ಎಂದು ತಿಳಿಸಿದ್ದಾರೆ.

You may also like

News

ಮಹಿಳೆ ಮೇಲೆ ಹಲ್ಲೆ ಹಾಗೂ ದೌರ್ಜನ್ಯ ಪ್ರಕರಣ – ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ

ಜಾಗದ ವಿಚಾರಕ್ಕೆ ಸಂಬಂಧಿಸಿದ ವಿವಾದದಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪುತ್ತೂರಿನ
News

ಕೋಮುದ್ವೇಷದ ಭಾಷಣ ಆರೋಪ – ಜಗದೀಶ್ ಕಾರಂತ್ ಹಾಗೂ ಶ್ರೀಕಾಂತ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು

ಪುತ್ತೂರಿನ ವಕೀಲರಾದ ಮಹೇಶ್ ಕಜೆ ಅವರು ಮಂಡಿಸಿದ ವಾದ ಕೋಮುದ್ವೇಷದ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹಿಂದೂ ಸಂಘಟನೆಗಳ ಮುಖಂಡರಾದ ಜಗದೀಶ್ ಕಾರಂತ್

You cannot copy content of this page