February 19, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸ್ಟೀವನ್ ಡಿಸೋಜ ಆಯ್ಕೆ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಚರ್ಚಿಸಿ, ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ವರ್ಗಗಳ ಸದಸ್ಯರನ್ನೊಳಗೊಂಡ ‘ಗ್ರಾಹಕರ ಸಲಹಾ ಸಮಿತಿ’ಯನ್ನು ರಚಿಸಲಾಗಿದ್ದು, ಈ ಸಮಿತಿಯ ಗ್ರಾಹಕ ಪ್ರತಿನಿಧಿಯಾಗಿ ಸಜೀಪ ಮೂಡ ಗ್ರಾಮದ ಬೊಳ್ಳಾಯಿ ನಿವಾಸಿ ಸ್ಟೀವನ್ ಡಿಸೋಜ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.

ವಿದ್ಯುತ್ ಗ್ರಾಹಕರ ಅಹವಾಲುಗಳನ್ನು ಆಲಿಸಿ, ಇಲಾಖೆ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಜವಾಬ್ದಾರಿ ಇನ್ನು ಮುಂದೆ ಇವರ ಮೇಲಿರಲಿದೆ. ಈ ನೇಮಕಾತಿಯು ಸ್ಥಳೀಯ ಮಟ್ಟದ ವಿದ್ಯುತ್ ಸಮಸ್ಯೆಗಳ ಶೀಘ್ರ ವಿಲೇವಾರಿಗೆ ಸಹಕಾರಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಕೃತಜ್ಞತೆ ಮತ್ತು ಅಭಿನಂದನೆ:

ತಮ್ಮ ನೇಮಕಾತಿಗೆ ಸಹಕರಿಸಿದ ಕರ್ನಾಟಕ ಸರ್ಕಾರದ ಮಾಜಿ ಉಸ್ತುವಾರಿ ಸಚಿವರು ಹಾಗೂ ಹಿರಿಯ ನಾಯಕರಾದ ಬಿ. ರಮಾನಾಥ ರೈ ಅವರಿಗೆ ಮತ್ತು ಮಾನ್ಯ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರಿಗೆ ಸ್ಟೀವನ್ ಡಿಸೋಜ ಹಾಗೂ ಅವರ ಅಭಿಮಾನಿಗಳು ಮತ್ತು ಸ್ಥಳೀಯರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ನೂತನ ಸದಸ್ಯರಾಗಿ ಆಯ್ಕೆಯಾದ ಸ್ಟೀವನ್ ಡಿಸೋಜ ಅವರಿಗೆ ಈ ಭಾಗದ ಜನತೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

You may also like

News

ಚಂದ್ರಗ್ರಹಣದ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

ಮಾರ್ಚ್ 3ರಂದು ಮಂಗಳವಾರ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರ ದರ್ಶನದ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ದೇವಸ್ಥಾನದ ಆಡಳಿತ
News

ದುಬೈನಲ್ಲಿ ಸಾಹಿತ್ಯದ ಕಂಪನ್ನು ಪಸರಿಸಿದ ‘ಕನ್ನಡ ಕಂಪು ಸರಣಿ-9’ ಮತ್ತು ಕೃತಿ ಲೋಕಾರ್ಪಣೆ

ದುಬೈ: ಮರುಭೂಮಿಯ ನಾಡಿನಲ್ಲಿ ಕನ್ನಡದ ಕಂಪು ಹರಡುವ ಉದ್ದೇಶದೊಂದಿಗೆ, ಕಥಾ ಬಿಂದು ಪ್ರಕಾಶನದ ವತಿಯಿಂದ ಆಯೋಜಿಸಲಾಗಿದ್ದ ‘ಕನ್ನಡ ಕಂಪು ಸರಣಿ-9’ ಕಾರ್ಯಕ್ರಮವು ಫೆಬ್ರವರಿ 18 ರಂದು ಬುಧವಾರ

You cannot copy content of this page