June 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಂದ್ರಗ್ರಹಣದ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ

ಮಾರ್ಚ್ 3ರಂದು ಮಂಗಳವಾರ ಚಂದ್ರಗ್ರಹಣ ಸಂಭವಿಸಲಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರ ದರ್ಶನದ ಸಮಯದಲ್ಲಿ ವ್ಯತ್ಯಯವಾಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಅಂದು ಅಪರಾಹ್ನ ಗಂಟೆ 3.19 ರಿಂದ ಸಂಜೆ ಗಂಟೆ 6.48ರ ವರೆಗೆ ಚಂದ್ರಗ್ರಹಣ ಇರಲಿದೆ. ಈ ಕಾರಣದಿಂದಾಗಿ ಧಾರ್ಮಿಕ ವಿಧಿವಿಧಾನಗಳ ಅನುಸಾರ ದೇವಸ್ಥಾನದ ದರ್ಶನ ವ್ಯವಸ್ಥೆಯಲ್ಲಿ ಈ ಕೆಳಗಿನಂತೆ ಬದಲಾವಣೆ ಮಾಡಲಾಗಿದೆ:

* ಮಧ್ಯಾಹ್ನದ ದರ್ಶನ: ಮಂಗಳವಾರ ಮಧ್ಯಾಹ್ನ ಒಂದೂವರೆ (1.30) ಗಂಟೆಯವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ.

* ಗ್ರಹಣದ ನಂತರದ ದರ್ಶನ: ಸಂಜೆ 6.48ಕ್ಕೆ ಗ್ರಹಣ ಮುಕ್ತಾಯವಾದ ನಂತರ ದೇವಸ್ಥಾನದ ಶುದ್ಧೀಕರಣ ಹಾಗೂ ಇತರ ವಿಶೇಷ ಪೂಜಾ ಕಾರ್ಯಗಳು ನಡೆಯಲಿವೆ. ಈ ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕ, ಅಂದರೆ ರಾತ್ರಿ 7.30ರ ನಂತರ ಭಕ್ತರಿಗೆ ಪುನಃ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು.

ದೂರದ ಊರುಗಳಿಂದ ಬರುವ ಭಕ್ತಾದಿಗಳು ಈ ಸಮಯದ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9945725511

You may also like

News

Thousands Gather in Faith and Devotion as Saint Anthony’s Minor Basilica, Dornahalli Celebrates Grand Annual Feast 2026

Amid an atmosphere of deep faith, prayer, and jubilation, thousands of devotees from across Karnataka and neighbouring states converged at
News

ಕಥೊಲಿಕ್ ಸಭಾ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾದ ವಂದನೀಯ ಫಾದರ್ ಐವನ್ ಮೈಕಲ್ ರೊಡ್ರಿಗಸ್ ಅವರಿಗೆ ಭಾವಪೂರ್ಣ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ಅತ್ಯಂತ ಬಲಿಷ್ಠ ಹಾಗೂ ಪ್ರಭಾವಿ ಸಂಘಟನೆಯಾದ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.)ಇದರ ಕೇಂದ್ರೀಯ ಸಮಿತಿಯ ನೂತನ ಆಧ್ಯಾತ್ಮಿಕ ನಿರ್ದೇಶಕರಾಗಿ ನೇಮಕಗೊಂಡಿರುವ ವಂದನೀಯ ಫಾದರ್

You cannot copy content of this page