August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಾರದಿಂದ ನೀರಿಲ್ಲದೆ ಮಾಣಿ ಕೊಟ್ರಾಸ್ ಜನತೆ ಕಂಗಾಲು – ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಚುನಾವಣೆ ಬಂದಾಗ ಮತ ಕೇಳಲು ನಾಲ್ಕೈದು ಬಾರಿ ಮನೆ ಬಾಗಿಲಿಗೆ ಬಿಕ್ಷುಕರಂತೆ ಬರುವ ರಾಜಕೀಯ ವ್ಯಕ್ತಿಗಳು ಜನ ಸಂಕಷ್ಟದಲ್ಲಿದ್ದಾಗ  ನಾಪತ್ತೆ

ಮಾಣಿ ಗ್ರಾಮದ ಕೊಟ್ರಾಸ್ ಮತ್ತು ಕಾಪಿಕಾಡ್ ಪರಿಸರದ ನಿವಾಸಿಗಳು ಕಳೆದ ಒಂದು ವಾರದಿಂದ ಕುಡಿಯುವ ನೀರಿಲ್ಲದೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೈನಂದಿನ ಕೆಲಸಗಳಿಗೂ ನೀರಿಲ್ಲದೆ ಬಡ ಕುಟುಂಬಗಳು ಪರದಾಡುತ್ತಿದ್ದು, ಅಧಿಕಾರಿಗಳು ಹಾಗೂ ರಾಜಕೀಯ ಮುಖಂಡರ ಮೌನಕ್ಕೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಮಸ್ಯೆಯ ವಿವರ:

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ನೀರಿನ ಪೈಪ್ ಲೈನ್ ತುಂಡಾಗಿರುವುದು ಈ ಸಮಸ್ಯೆಗೆ ಮೂಲ ಕಾರಣ ಎಂದು ಹೇಳಲಾಗುತ್ತಿದೆ. ಪೈಪ್ ದುರಸ್ತಿಯ ಬಗ್ಗೆ ವಿಚಾರಿಸಿದರೆ, “ಇಂದು ಸರಿಯಾಗುತ್ತದೆ, ನಾಳೆ ಸರಿಯಾಗುತ್ತದೆ” ಎಂಬ ಹಾರಿಕೆ ಉತ್ತರವನ್ನೇ ಸಂಬಂಧಪಟ್ಟವರು ನೀಡುತ್ತಿದ್ದಾರೆ. ಆದರೆ, ವಾರ ಕಳೆದರೂ ಹನಿ ನೀರು ಬಾರದ ಕಾರಣ ಜನರು ಹೈರಾಣಾಗಿದ್ದಾರೆ.

ನೊಂದ ನಾಗರಿಕರ ಅಳಲು:

“ಚುನಾವಣೆ ಬಂದಾಗ ಮತ ಕೇಳಲು ನಾಲ್ಕೈದು ಬಾರಿ ಮನೆ ಬಾಗಿಲಿಗೆ ಬಿಕ್ಷುಕರಂತೆ ಬರುವ ರಾಜಕೀಯ ವ್ಯಕ್ತಿಗಳು, ಈಗ ಜನ ಸಂಕಷ್ಟದಲ್ಲಿದ್ದಾಗ ಇತ್ತ ತಲೆಹಾಕಿಯೂ ನೋಡುತ್ತಿಲ್ಲ. ಬಡವರು ನೀರಿಲ್ಲದೆ ಪರದಾಡುತ್ತಿದ್ದರೆ ಕೇಳುವವರು ಯಾರೂ ಇಲ್ಲದಂತಾಗಿದೆ,” ಎಂದು ಕಾಪಿಕಾಡ್ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಇಚ್ಛಾಶಕ್ತಿಯ ಕೊರತೆ ಮತ್ತು ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನವೇ ಈ ದುಸ್ಥಿತಿಗೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ. ಕೂಡಲೇ ಸಂಬಂಧಪಟ್ಟ ಪಂಚಾಯತ್ ಆಡಳಿತ ಹಾಗೂ ಅಧಿಕಾರಿಗಳು ಎಚ್ಚೆತ್ತುಕೊಂಡು ಪೈಪ್ ಲೈನ್ ಸರಿಪಡಿಸಿ ನೀರಿನ ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page