August 28, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಲೋಕೋಪಯೋಗಿ ಇಲಾಖೆಯ ಎಸ್‌ಡಿಎ – ಲಂಚ ಸ್ವೀಕರಿಸುವಾಗ ಬಂಧನ

ಸರ್ಕಾರಿ ಕಾಮಗಾರಿಗಳ ಬಿಲ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಇಂದು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಂಗಳೂರಿನ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಛೇರಿಯ ಎಸ್‌ಡಿಎ (SDA) ಸಂಪತ್ ಬಂಧಿತ ಆರೋಪಿ.

ಘಟನೆಯ ಹಿನ್ನೆಲೆ:

ದೂರುದಾರರು ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಪ್ರಥಮ ದರ್ಜೆ ಇಲೆಕ್ಟ್ರಿಕಲ್ ಗುತ್ತಿಗೆದಾರರಾಗಿದ್ದಾರೆ. ಇವರು 2025ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್‌ಗಳಲ್ಲಿ ದಾರಿ ದೀಪ ವಿಸ್ತರಣೆಯ ಸರ್ಕಾರಿ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದರು. ಈ ಕೆಲಸದ ಬಿಲ್ ಪಾವತಿ ಮಾಡಿಕೊಡಲು ಎಸ್‌ಡಿಎ ಸಂಪತ್ ಅವರು ಒಟ್ಟು ಬಿಲ್ ಮೊತ್ತದ ಶೇ. 4 ರಷ್ಟು, ಅಂದರೆ 22,600 ರೂಪಾಯಿ ಲಂಚ ನೀಡುವಂತೆ ಬೇಡಿಕೆಯಿಟ್ಟಿದ್ದರು. ಲಂಚ ನೀಡಲು ಇಚ್ಛಿಸದ ಗುತ್ತಿಗೆದಾರರು ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಲೋಕಾಯುಕ್ತ ಕಾರ್ಯಾಚರಣೆ:

ದೂರಿನ ಅನ್ವಯ ಇಂದು ಮಾರ್ಚ್ 2ರಂದು ಸೋಮವಾರ ಮಂಗಳೂರು ಲೋಕಾಯುಕ್ತ ಪೊಲೀಸರು ಯೋಜಿತ ಕಾರ್ಯಾಚರಣೆ ನಡೆಸಿದರು. ದೂರುದಾರರಿಂದ 22,600 ರೂಪಾಯಿ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ಸಂಪತ್ ಅವರನ್ನು  ಹಿಡಿಯಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ತಂಡದ ವಿವರ:

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.

* ನೇತೃತ್ವ: ಡಿವೈಎಸ್ಪಿ ಸುರೇಶ್ ಕುಮಾರ್ ಪಿ., ಡಾ. ಗಾನ ಪಿ. ಕುಮಾರ್ ಮತ್ತು ಪಿಐ ಭಾರತಿ ಜಿ.

* ತನಿಖಾ ತಂಡ: ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಹಾಗೂ ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

You may also like

News

CODP ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಸ್ಥಳೀಯ ಆಡಳಿತದಲ್ಲಿ ಮಹಿಳಾ ನಾಯಕತ್ವಕ್ಕೆ ತರಬೇತಿ

ಸ್ಥಳೀಯ ಆಡಳಿತದಲ್ಲಿ ಮಹಿಳೆಯರ ನಾಯಕತ್ವವನ್ನು ಬಲಪಡಿಸುವ ಉದ್ದೇಶದಿಂದ ಸಿಓಡಿಪಿ ಮಂಗಳೂರು ಹಾಗೂ ಕ್ರಾಸ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದಲ್ಲಿ ಮಹಿಳಾ ಸಬಲೀಕರಣ ಯೋಜನೆಯಡಿ “ಸ್ಥಳೀಯ ಆಡಳಿತದಲ್ಲಿ ನಾಯಕತ್ವ”
News

ಮಿಲಾಗ್ರಿಸ್ ಸೊಸೈಟಿಯಿಂದ ಪಾನೀರ್ ಅನಾಥಾಶ್ರಮದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ನೆರವು

ಆಶ್ರಮಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸುತ್ತಿರುವುದು ಶ್ಲಾಘನೀಯ – ಜೆ. ಆರ್. ಲೋಬೊ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ., ಕಾರವಾರ ಇದರ ಉರ್ವಾ ಶಾಖೆಯ ಆಶ್ರಯದಲ್ಲಿ

You cannot copy content of this page