August 26, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ಪರೀಕ್ಷಾ ದಿನಗಳಲ್ಲಿ KSRTC ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ರಾಜ್ಯದಲ್ಲಿ ಶೀಘ್ರವೇ ಪ್ರಾರಂಭವಾಗಲಿರುವ SSLC ವಾರ್ಷಿಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಭರ್ಜರಿ ಕೊಡುಗೆ ನೀಡಿದೆ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ಹಿಂತಿರುಗಲು ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅಧಿಕೃತ ಆದೇಶ ಹೊರಡಿಸಲಾಗಿದೆ.

ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಪ್ರಯಾಣಿಸಿ:

ದಿನಾಂಕ 18.03.2026 ರಿಂದ 02.04.2026 ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ಬಸ್ ಹತ್ತುವಾಗ ತಮ್ಮ ‘ SSLC ಪರೀಕ್ಷಾ ಪ್ರವೇಶ ಪತ್ರ’ (Hall Ticket) ತೋರಿಸುವುದು ಕಡ್ಡಾಯವಾಗಿದೆ.

ಯಾವ ಬಸ್‌ಗಳಲ್ಲಿ ಸೌಲಭ್ಯ ಲಭ್ಯ?

ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಈ ಉಚಿತ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ಗಳನ್ನು ನಿಲುಗಡೆ (Request Stop) ಮಾಡಲು ಚಾಲಕ ಮತ್ತು ನಿರ್ವಾಹಕರಿಗೆ ಸೂಚನೆ ನೀಡಲಾಗಿದೆ.

ಪ್ರಮುಖ ಅಂಶಗಳು:

* ಸೌಲಭ್ಯದ ಅವಧಿ: 18 ಮಾರ್ಚ್ 2026 ರಿಂದ 02 ಏಪ್ರಿಲ್ 2026 ರವರೆಗೆ.

* ಅಗತ್ಯ ದಾಖಲೆ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರ.

* ಬಸ್ ವಿಧಗಳು: ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳು.

* ಉದ್ದೇಶ: ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ಸಮಯಕ್ಕೆ ಸರಿಯಾಗಿ ಮತ್ತು ಯಾವುದೇ ತೊಂದರೆಯಿಲ್ಲದೆ ತಲುಪಲು ಸಹಕರಿಸುವುದು.

You may also like

News

ಮೊಬೈಲ್‌ಗಾಗಿ ಜಗಳ ತಂಗಿಯ ಕೊಲೆ – ಸಹೋದರ ಸ್ಯಾಮ್ಸನ್ ಫ್ರಾನ್ಸಿಸ್ ಕುಟಿನ್ಹಾನಿಗೆ 5 ವರ್ಷ ಜೈಲು!

ಮೊಬೈಲ್ ವಿಚಾರವಾಗಿ ನಡೆದ ಜಗಳದ ವೇಳೆ ಸ್ವಂತ ತಂಗಿಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಆಕೆಯ ಸಾವಿಗೆ ಕಾರಣವಾದ ಪ್ರಕರಣದಲ್ಲಿ ಆರೋಪಿಗೆ ಮಂಗಳೂರು ನ್ಯಾಯಾಲಯ ಶಿಕ್ಷೆ ವಿಧಿಸಿದೆ.
News

ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 4ರವರೆಗೆ ನಡೆಯಲಿರುವ 28ನೇ ವರ್ಷದ ಭಜನಾ ಕಮ್ಮಟದ ಪೂರ್ವಭಾವಿ ಸಭೆ ಮಂಗಳವಾರ ಮಹೋತ್ಸವ ಸಭಾಭವನದಲ್ಲಿ ನಡೆಯಿತು. ಭಜನಾ ಕಮ್ಮಟದ

You cannot copy content of this page